suddibindu.in
ಕುಮಟಾ : ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯ ಆದೇಶದಂತೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗಜು ನಾಯ್ಕ,ಪ್ರಧಾನ ಕಾರ್ಯದರ್ಶಿ, ರಾಜ್ಯ ಹಿಂದುಳಿದ ವರ್ಗಗಳ ವಿಭಾಗ, ಕೆಪಿಸಿಸಿ ಇವರು ಪಕ್ಷದಲ್ಲಿ ಹೊಂದಿರುವ ಎಲ್ಲಾ ಹುದ್ದೆಗಳಿಗೆ ನೀಡಲಾಗಿದ್ದ ಅಮಾನತು ಆದೇಶವನ್ನ ಹಿಂಪಡೆದಿರುವ ಬಗ್ಗೆ ಆದೇಶಿಸಲಾಗಿದೆ.

- Murder/200ರೂ ಕೂಲಿ ಹಣಕ್ಕೆ ಬೀದಿಯಲ್ಲಿ ಬಿತ್ತು ಹೆಣ : ಉತ್ತರ ಕನ್ನಡದಲ್ಲಿ ಭೀಕರ ಘಟನೆ
- ಕಡಲತೀರದಲ್ಲಿ ಜಿಂಕೆಯ ಮೃತದೇಹ ಪತ್ತೆ
- ಹಟ್ಟಿಕೇರಿಯಲ್ಲಿ ಗ್ರಾಮೀಣ ಕ್ರೀಡೆಗೆ ಜೀವ ತುಂಬಿದ ಕೇಸರುಗದ್ದೆ ಕ್ರೀಡಾಕೂಟ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ನಿವೇದಿತ್ ಆಳ್ವ ಇವರ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷರಿಗೆ ಮಾಡಿದ ಶಿಫಾರಸ್ಸಿನ ಮೇರೆಗೆ ಉತ್ತರಕನ್ನಡ ಕಾಂಗ್ರೆಸ್ ಅಧ್ಯಕ್ಷ ಸಾಯಿನಾಥ್ ಕೇಶವ್ ಗಾಂವಕರ್ ಇವರ ವರದಿಯನ್ನು ಆದರಿಸಿ ಕೆಪಿಸಿಸಿ ಅಧ್ಯಕ್ಷರ ಅನುಮೋದನೆಯೊಂದಿಗೆ ಪಕ್ಷದಲ್ಲಿ ಹೊಂದಿರುವ ಎಲ್ಲಾ ಹುದ್ದೆಗಳಿಂದ ಅಮಾನತ್ತು ಮಾಡಿದ್ದ ಆದೇಶವನ್ನು ಹಿಂಪಡೆಯಲಾಗಿದೆ.