suddibindu.in
ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ (According to the kidnapping of the woman) ಮಾಜಿ ಸಚಿವ ,ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದ ಬೆನ್ನಲ್ಲೇ ಮಾಜಿ ಸಚಿವ, ಶಾಸಕ ಎಚ್.ಡಿ ರೇವಣ್ಣ ಅವರನ್ನು ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸದಿಂದ ರೇವಣ್ಣ ಅವರನ್ನು ವಶಕ್ಕೆ ಪಡೆದು ಅಧಿಕಾರಿಗಳು ನೇರವಾಗಿ ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ
- ಕೆ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆ : ನಾಮ ಪತ್ರ ಸಲ್ಲಿಸಿದ ಸರಸ್ವತಿ ಎನ್. ರವಿ
- ಕೇವಲ 48 ಗಂಟೆಗಳಲ್ಲಿ ಅಂತರ್ಜಿಲ್ಲಾ ಕಳ್ಳರ ಬಂಧಿಸಿದ ಕುಮಟಾ ಪೊಲೀಸರು
- ಮದುವೆ ರಿಸೆಪ್ಷನ್ನಲ್ಲಿ ಪಾರ್ಕಿಂಗ್ ವಿವಾದ: ಭಟ್ಕಳದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ,
ಉಪ್ಪ ತಿಂದ ಮೇಲೆ ನೀರು ಕುಡಿಯಲೇ ಬೇಕು. ತಪ್ಪು ಮಾಡಿದ ಮೇಲೆ ಶಿಕ್ಷೆ ಅನುಭವಿಸಲೇಬೇಕು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಇತಿಹಾಸದಲ್ಲೇ ಇದುವರೆಗೆ ಯಾರೂ ಜೈಲಿಗೆ ಹೋದ ಉದಾಹರಣೆಯೇ ಇಲ್ಲ.ಇದೇ ಮೊದಲ ಬಾರಿಗೆ ದೇವೇಗೌಡರ ಪ್ರಿಯಪುತ್ರ ಹೆಚ್.ಡಿ.ರೇವಣ್ಣ ಅರೆಸ್ಟ್ ಆಗಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣಾ ಸಮುದಲ್ಲಿ ಮೈತ್ರಿ ಪಕ್ಷದ ನಾಯಕನ ಬಂಧನವಾಗಿರುವುದು ಬಿಜೆಪಿ ಸಹ ತಲೆ ತಗ್ಗಿಸುವಂತಾಗಿದೆ.