suddibindu.in
ದಾಂಡೇಲಿ : ಗಂಡ ಹೆಂಡತಿಯ ಜಗಳದಿಂದಾಗಿ ಆರು ವರ್ಷದ ಗಂಡು ಮಗು ಒಂದನ್ನು ನಾಲಾಕ್ಕೆ ಬಿಸಾಕಿದ ಅಮಾನವೀಯ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ.
- ಚಲಿಸುತ್ತಿದ್ದ ರೈಲಿನಿಂದ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು – ಮಿರ್ಜಾನ ಸಮೀಪ ದಾರುಣ ಘಟನೆ
- ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಮತ್ತೆ ಜೀವ ಬೆದರಿಕೆ
- ದಿನಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ : ಪತ್ರಕರ್ತ ಪ್ರಮೋದ ಹರಿಕಾಂತ
ಹಾಲಮಡ್ಡಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ರವಿಕುಮಾರ್ ಶೆಳ್ಳೆ ಮತ್ತು ಸಾವಿತ್ರಿ ದಂಪತಿಗಳು ಪರಸ್ಪರ ಜಗಳ ಮಾಡಿಕೊಂಡಿದ್ದಾರೆ.ಜಗಳದಿಂದ ಮಾನಸಿಕವಾಗಿ ನೊಂದ ಸಾವಿತ್ರಿ 6 ವರ್ಷದ ಮಗು ವಿನೋದ್ ಈತನನ್ನು ಅಲ್ಲೆ ಹತ್ತಿರದಲ್ಲಿರುವ ದೊಡ್ಡ ನಾಲಾಕ್ಕೆ ಎಸೆದುಬಂದಿದ್ದಾಳೆ. ಸ್ವಲ್ಪ ಹೊತ್ತಿನ ಬಳಿಕ ಈ ಘಟನೆಯಿಂದ ಮಾನಸಿಕವಾಗಿ ಅಘಾತಗೊಂಡ ಸಾವಿತ್ರಿ ಮಗುವನ್ನು ಎಸೆದು ಬಂದಿರುವುದನ್ನು ಸ್ಥಳೀಯರಿಗೆ ತಿಳಿಸಿದ್ದಾಳೆ.
ತಕ್ಷಣವೇ ಸ್ಥಳೀಯರು ಮಗುವಿನ ಹುಡುಕಾಟವನ್ನು ನಡೆಸಿದ್ದಾರೆ. ಕೂಡಲೇ ದಾಂಡೇಲಿಯ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿದ್ದಾರೆ. ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ (police) ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿಗಳು ಸಹಕಾರದಲ್ಲಿ ಹಾಗೂ ಸ್ಥಳೀಯ ಮುಳುಗು ತಜ್ಞರ ಮತ್ತು ಸ್ಥಳೀಯರ ನೆರವಿನೊಂದಿಗೆ ಮಗುವಿನ ಶೋಧ ಕಾರ್ಯವನ್ನು ನಡೆಸಲಾಗಿದ್ದು ಇದುವರೆಗ ಮಗು ಮೊಸಳೆ (crocodile) ಬಾಯಲ್ಲಿ ಸಿಕ್ಕಿರುವುದಾಗಿ ಹೇಳಲಾಗಿದೆ.