suddibindu.in
ಚಿತ್ರದುರ್ಗ: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆನ್ನುವ ದೂರಿನ ಮೇಲೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ
- ದೇವಾಲಯದ ಮೇಲ್ಚಾವಣಿ ತೆಗೆದು ಕಳ್ಳತನ : ರಾಧಾಕೃಷ್ಣ ದೇವಸ್ಥಾನದಲ್ಲಿ ಕಳ್ಳರ ಕೈಚಳಕ
- ಗ್ರಾಹಕನ ವೇಷದಲ್ಲಿ ಕಳ್ಳ :ಅಂಗಡಿಯಿಂದ ಮೊಬೈಲ್ ಕದ್ದ ಘಟನೆ ವೈರಲ್
- ಹೆದ್ದಾರಿಯಲ್ಲಿ ಟಿಪ್ಪರ್- ಸ್ಕೂಟರ್ ಅಪಘಾತ : ಮಹಿಳೆ ಸ್ಥಳದಲ್ಲೇ ಸಾವು, ಪುಟ್ಟ ಮಕ್ಕಳಿಬ್ಬರೂ ಗಂಭೀರ
ದೇವರಾಜೇಗೌಡ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.ಆದರೆ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಅವರು ಪ್ರಮುಖ ಮಾಹಿತಿದಾರರಾದ್ದರಿಂದ ಅದು ಇತ್ತೀಚೆಗೆ ಖಾಸಗಿ ಚಾನಲ್ ಒಂದರ ಮೂಲಕ ಬೆಳಕಿಗೆ ಬಂದಿದೆ. ಪ್ರಜ್ವಲ್ ರೇವಣ್ಣ ಅವರು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಳೆದ ವರ್ಷ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದ ದೇವರಾಜೇಗೌಡರು, ಹಾಸನದಿಂದ ಜೆಡಿಎಸ್ ಸಂಸದರಿಗೆ ಲೋಕಸಭೆ ಟಿಕೆಟ್ ನೀಡದಂತೆ ಬಿಜೆಪಿ ನಾಯಕರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ದೇವರಾಜೇಗೌಡ ಸ್ಪರ್ಧೆ ಮಾಡಿದ್ದರು. .ಹಾಸನ ಜಿಲ್ಲೆಯ 36 ವರ್ಷದ ಮಹಿಳೆಯೊಬ್ಬರು ತಮ್ಮ ಆಸ್ತಿ ಮಾರಾಟಕ್ಕೆ ಸಹಾಯ ಮಾಡುವ ನೆಪದಲ್ಲಿ ದೇವರಾಜೇಗೌಡ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಹೆದರಿಸಿ ಬೆದರಿಸಿ ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವೀಡಿಯೋ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ. ವೀಡಿಯೋ ಕಾಲ್ ಮಾಡಿ ತನ್ನ ಖಾಸಗಿ ಅಂಗಾಂಗ ತೋರಿಸಿ ಪ್ರಚೋದನೆಗೆ ಯತ್ನಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಮಹಿಳೆ ದೂರು ಆಧರಿಸಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ದೇವರಾಜೇಗೌಡ ಅವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.