Suddibindu.in
ಸಿದ್ಧಾಪುರ : ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ವಸಂತ ಎಲ್. ನಾಯ್ಕ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶಾಸಕರಿಗೆ ಪತ್ರ ಬರೆದಿದ್ದಾರೆ.
- ರಾಜ್ಯವನ್ನೆ ಬೆಚ್ಚಿಬೀಳಿಸಿದ ದುರಂತ: ಐಎಎಸ್ ಬಿಳಗಿ ಸೇರಿ ಮೂವರು ಸ್ಥಳದಲ್ಲೇ ಸಾವು
- ಅಂಕೋಲಾ-ಯಲ್ಲಾಪುರ ಹೆದ್ದಾರಿಯಲ್ಲಿ KSRTC ಬಸ್ ಪಲ್ಟಿ
- ಗರ್ಭಿಣಿ ಶ್ವಾನಕ್ಕೆ ಸಂಪ್ರದಾಯದ ಸೀಮಂತ : ಶಿಗ್ಲಿ ಮನೆಯ ವಿಶೇಷ ಪ್ರೀತಿ
ವಸಂತ ನಾಯ್ಕ ಅವರು ಕಳೆದ ಮೂರು ವರ್ಷಕ್ಕೂ ಹೆಚ್ಚಿನ ಕಾಲ ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ನ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿ ತಾಲೂಕಿನಾದ್ಯಂತ ನಿಷ್ಠೆಯಿಂದ ಪಕ್ಷದ ಸಂಘಟನೆ ಮಾಡಿದ್ದರು, ಆದರೆ ಅವರ ವಯಕ್ತಿಕ ಕಾರಣಗಳಿಂದ ಇನ್ನು ಮುಂದೆ ಪಕ್ಷದ ಸಂಘಟನೆಯಲ್ಲಿ ಸಕ್ರೀಯವಾಗಿ ಭಾಗವಹಿಸಲು ಸಾಧ್ಯವಾಗದೆ ಇರುವ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶಿರಸಿ ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಅವರಿಗೆ ಪತ್ರ ಬರೆದಿದ್ದಾರೆ .
ಇನ್ನೂ ಇಷ್ಟು ವರ್ಷಗಳ ಕಾಲ ಪಕ್ಷ ಸಂಘಟನೆಗೆ ಸಹಕಾರ ನೀಡಿದ ಎಲ್ಲರಿಗೂ ವಸಂತ ನಾಯ್ಕ ಅವರು ಧನ್ಯವದ ತಿಳಿಸಿದ್ದು, ತಮ್ಮ ರಾಜಿನಾಮೆಯನ್ನು ಪುರಸ್ಕರಿಸಿ ಬೇರೆಯವರಿಗೆ ಅವಕಾಶ ನೀಡುವಂತೆ ವಿನಂತಿಸಿದ್ದಾರೆ.







