suddibindu.in
ಬೆಂಗಳೂರು: ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಚುರುಕಾಗಿದ್ದು, ಒಂದು ವಾರದ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ
- ಮಹಿಳೆಯ ಕಣ್ಣೀರಿಗೆ ನ್ಯಾಯ : ವಿಕೃತ ಕಾಮಿ ಉಲ್ಲಾಸಗೆ 10ವರ್ಷ ಜೈಲು ಶಿಕ್ಷೆ
- ಮುಂಡಗೋಡಕ್ಕೆ ಆಗಮಿಸಿದ ಟಿಬೆಟಿಯನ್ ಧರ್ಮಗುರು ದಲಾಯಿ ಲಾಮಾ
- ನೌಕಾನೆಲೆಯ ವಜ್ರಕೋಶದಲ್ಲಿ ರಹಸ್ಯ ಸ್ಪೋಟ : ಅಲಿಗೇರಿ ಗ್ರಾಮದಲ್ಲಿ ಮನೆಗಳ ಗೋಡೆಗಳಿಗೆ ಬಿರುಕು
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮೇ 12ರಿಂದ (ಇಂದಿನಿಂದ) ಮೇ 16ರ ವರೆಗೆ ಭಾರೀ ಮಳೆಯಾಗಲಿದೆ. ಮೇ 17 ಮತ್ತು 18ರಂದು ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೇ 13ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
ಇಂದು ಉತ್ತರ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮೇ 13 ಮತ್ತು 14ರಂದು ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಒಂದು ವಾರ ಸಾಧಾರಣ ಮಳೆಯಾಗಲಿದೆ. ಮೇ 12ರಂದು ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆ, ಮೇ 13 ಮತ್ತು 14ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹಾಗೂ ಗುಡುಗುನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.





