suddibindu.in
ಕಾರವಾರ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(Atal Bihari Vajpayee) ಹೆಸರಿನ ದೇಶದ ಅತಿದೊಡ್ಡ ಸಮುದ್ರ ಸೇತುವೆ (ಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತುವೆ) ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಪ್ರಧಾನಿ ನರೇಂದ್ರ ಮೋದಿ(Narendra Modi,) ಕೆಲಸಗಳ ಬಗ್ಗೆ ಪರೋಕ್ಷ ಗುಣಗಾನ ಮಾಡಿದ್ದರು. ಇದಕ್ಕೆ ಡಾ.ಅಂಜಲಿ ನಿಂಬಾಳ್ಕರ್ (Dr. Anjali Nimbalkar,) ಚಾಟಿ ಬಿಸಿದ್ದಾರೆ.
- TV9 ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ ಕೊಟ್ಟ ನಟಿ ಸಂಜನಾ ಹಾಗೂ ನಟ ವಿರಾಟ್
- ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ವೀಣಾ ಗುನಗಿಯವರಿಗೆ ಗುನಗಿ ಸಮಾಜ ಸಹಾಯವಾಣಿ ಸಂಘದಿಂದ ಸನ್ಮಾನ
- ಸ್ಕೂಟಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು : ಸ್ಕೂಟಿ ಸವಾರ ಗಂಭೀರ
ಇದಾದ ಬಳಿಕ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡು, ಅಭಿವೃದ್ಧಿಗಾಗಿ ಮತ ಚಲಾಯಿಸಿ ಎಂದು ಮನವಿ ಮಾಡಿದ್ದರು. ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಪ್ರತಿಪಕ್ಷಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ ಅಂಜಲಿ ನಿಂಬಾಳ್ಕರ್ ಗರಂ ಆಗಿದ್ದಯ, ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್ ಮಾಡಲು ಸಹಾಯ ಮಾಡಲ್ಲ ಎಂದು ರಶ್ಮಿಕಾ ಮಂದಣ್ಣ ವಿಡಿಯೋಗೆ ತಮ್ಮ ಅಧಿಕೃತ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ
ಡಾ. ಅಂಜಲಿ ನಿಂಬಾಳ್ಕರ್, ಬುಲೆಟ್ ರೈಲಿನ ಬಗ್ಗೆ ನಿಮಗೆ ಏನಾದರೂ ಹೇಳಲು ಇದೆಯೇ? ಎಂದು ಪ್ರಶ್ನಿಸಿದ್ದಾರೆ. ಮುಂಬೈ ಮತ್ತು ಅಹಮದಾಬಾದ್ ಬುಲೆಟ್ ರೈಲು : ಅದೊಂದು ನಿರ್ಮಾಣದ ದುರಂತ, ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್ ಮಾಡಲು ಸಹಾಯ ಮಾಡಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.