suddibindu.in
ಗೋಕರ್ಣ : ಪ್ರವಾಸಿಗರನ್ನ ಹೊತ್ತೋಯ್ದ ಬೋಟ್ ಮುಳುಗಡೆಯಾಗಿ ಬೋಟ್ನಲ್ಲಿದ್ದ 40ಮಂದಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿಯಲ್ಲಿ ನಡೆದಿದೆ.
- ಬಾಲಕ ಪ್ರಮೋದ್ ಹೃದಯ ಚಿಕಿತ್ಸೆಗೆ ಸಚಿವ ಮಂಕಾಳ ವೈದ್ಯರಿಂದ ನೆರವು
- ಕಣ್ಣೀರಿನೊಂದಿಗೆ ಶಿರಾಲಿಗೆ ವಾಪಸ್ ಆದ ರಶ್ಮಿ ಕುಟುಂಬ
- ಮದುವೆ ನಿಶ್ಚಯವಾಗಿದ್ದ ಯುವತಿಯ ಜೀವ ಕಸಿದ ಬಸ್ ದುರಂತ
ರವಿವಾರ ರಜಾ ದಿನವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದರು. ಘಟನೆಯಲ್ಲಿ ಬೋಟಿನಲ್ಲಿದ್ದ 40ಮಂದಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬೋಟ್ ಮುಡಂಗಿಯ ಗಣೇಶ್ ಎಂಬುವವರಿಗೆ ಸೇರಿದ್ದಾಗಿದೆ. ಘಟನೆ ನಡೆಯುತ್ತಿದ್ದಂತೆ ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಮತ್ತು ಸ್ಥಳೀಯ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಎಲ್ಲರನ್ನು ರಕ್ಷಣೆ ಮಾಡಿದ್ದಾರೆ.
ಬೋಟ್ನಲ್ಲಿ ಮಿತಿಗಿಂತ ಹೆಚ್ಚಿನ ಪ್ರವಾಸಿಗರನ್ನ ತುಂಬಿರುವುದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.





