suddibindu.in
ಬೆಳ್ತಂಗಡಿ : ಅಕ್ರಮ ಕಲ್ಲುಕೋರೆ ನಡೆಸುತ್ತಿದ್ದ ಆರೋಪದಲ್ಲಿ ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆದಿದ್ದರಿಂದ ಸಿಟ್ಟಿಗೆದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹೋಗಿ ಪೊಲೀಸರೋಡನೆ ಅಸಭ್ಯ ವರ್ತನೆ ತೋರಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೊಲೀಸ್ ಠಾಣೆಗೆ ಹೋದ ಶಾಸಕ ‘ಠಾಣೆ ಏನು ನಿಮ್ಮ ಅಪ್ಪನ ಮನೆ ಆಸ್ತಿಯಾ ಎಂದು ಪೊಲೀಸರಿಗೆ ನಿಂದಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸಲು ಬಿಜೆಪಿ ಹಲವು ಪ್ರಯತ್ನಗಳನ್ನು ನಡೆಸುತ್ತಿದೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದಾರೆ.

ಪೊಲೀಸರ ನೈತಿಕ ಸ್ಥೈರ್ಯವನ್ನು ಕಸಿಯುತ್ತ, ಕ್ರಿಮಿನಲ್ ಗಳಿಗೆ ಬೆಂಬಲ ನೀಡುತ್ತ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಕೆಲಸಗಳಿಗೆ ಕಡಿವಾಣ ಹಾಕುವುದಕ್ಕೆ ನಮ್ಮ ಸರ್ಕಾರ ಸಮರ್ಥವಾಗಿದೆ ಎಂದು ರಾಜ್ಯ ಕಾಂಗ್ರೇಸ್ ಸರ್ಕಾರ ಎಚ್ಚರಿಸಿದೆ.