suddibindu.in
Bengaluru ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ 5 ದಿನಗಳ ಕಾಲ ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯದ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ (heavy rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- ಉತ್ತರ ಕನ್ನಡದಲ್ಲಿ ಯೋಜನೆಗಳಿಗೆ ವಿರೋಧ ಮಾಡುವ ಡೊಂಗಿ ಹೋರಾಟಗಾರರು ಆಸ್ಪತ್ರೆಗಾಗಿ ಯಾಕೆ ಹೋರಾಡುತ್ತಿಲ್ಲ.?
- Fish market/ಮೀನು ಮಾರುಕಟ್ಟೆ ಸ್ಥಳಾಂತರವಿಲ್ಲ : ಸಚಿವ ಮಂಕಾಳ್ ವೈದ್ಯ
- ಸ್ಮರಣೀಯ ಸೇವೆಯೊಂದಿಗೆ ವಿಶ್ರಾಂತ ಜೀವನಕ್ಕೆ ಅಡಿಯಿಡುತ್ತಿರುವ ಶಿಸ್ತಿನ ಶಿಕ್ಷಕ ಉಮೇಶ ನಾಯ್ಕ
ಉತ್ತರ ಕನ್ನಡ, (uttara Kannada) ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಮುಂದುವರಿದಿದೆ.ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.ಗುಡುಗು, ಮಿಂಚು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ನಾಳೆಯಿಂದ ಮಳೆ ಇನ್ನಷ್ಟು ಚುರುಕುಗೊಳ್ಳಲಿದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಏಳುವ ಸಾಧ್ಯತೆ ಇದ್ದು, ಮುಂದಿನ 48ಗಂಟೆಗಳಲ್ಲಿ ಕರ್ನಾಟಕ ಮತ್ತು ಗೋವಾಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಕರ್ನಾಟಕಕ್ಕೆ ಮೇ 27ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.