suddibindu.in
ಶಿರಸಿ: ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿದ್ದು ಎಲ್ಲೆಡೆ ಜನಾಕ್ರೋಶದ ನಡುವೆಯೇ ಚೆನ್ನಗಿರಿ ಪೊಲೀಸ್ ಠಾಣೆ ದ್ವಂಸ ಪ್ರಕರಣ ಆಡಳಿತದಲ್ಲಿ ಕಾನೂನು ವ್ಯವಸ್ಥೆ ಇದೆಯೇ ಎಂಬ ಸಂಶಯ ಕಾಡುತ್ತಿದೆ ಎಂದು ಮಾಜಿ ಸ್ಪೀಕರ್ ಹಾಗೂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯ ಸರಕಾದ ವಿರುದ್ಧ ಆರೋಪಿಸಿದ್ದಾರೆ.
ಸಾರ್ವಜನಿಕರನ್ನು ರಕ್ಷಣೆ ಮಾಡುವ ಪೊಲೀಸ್ ಠಾಣೆಗೆ ರಕ್ಷಣೆ ಕೊಡಬೇಕಾಗಿ ಬಂದ ಪರಿಸ್ಥಿತಿ ನೋಡಿದರೆ ರಾಜ್ಯದಲ್ಲಿ ಚುನಾಯಿತ ಸರಕಾರ ಇದೆಯೇ ಎಂದು ಪ್ರಶ್ನಿಸುವಂತಾಗಿದೆ. ಈ ಹಿಂದೆಯೂ ಕಾಂಗ್ರೆಸ್ ಸರಕಾರವಿದ್ದಾಗ ಕೆ ಜೆ ಹಳ್ಳಿ, ಡಿ ಜೆ ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಮುಂತಾದ ಸ್ಥಳಗಳಲ್ಲಿ ಠಾಣೆ ದ್ವಂಸ ಸಾರ್ವಜನಿಕ ಆಸ್ತಿ ಹಾನಿ ಮಾಡುವಾಗಲೂ ಅಧಿಕಾರಿಗಳ ವಿರುದ್ದ ಕ್ರಮಕೈಕೊಂಡರೆ ವಿನಹ ತಪ್ಪಿತಸ್ತರನ್ನು ಶಿಕ್ಷಸಲಿಲ್ಲ.
ಇದನ್ನೂ ಓದಿ
- Breaking/BEO ಭೇಟಿ ಬಳಿಕ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
- ಪೊಲೀಸ್ ಸ್ಟೇಷನ್ಲ್ಲಿ ಡೀಲ್, ಮೈದಾನದಲ್ಲಿ ಟ್ರ್ಯಾಪ್ : ಅಗ್ರಹಾರ ಠಾಣಾ ಇನ್ಸ್ಪೆಕ್ಟರ್ ಬಂಧನ
- ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣ : ಚೆನೈನಲ್ಲಿ ಚಿರಾಗ್ಗೆ ಬಂಧಿಸಿದ ಪೊಲೀಸರು
ಈಗಲೂ ಸಹ ಚೆನ್ನಗಿರಿಯಲ್ಲಿ ಅಧಿಕಾರಿಗಳನ್ನು ಅಮಾನತ್ತು ಗೊಳಿಸಿ ರಾಜ್ಯ ಪೊಲೀಸ್ ಇಲಾಖೆಯ ನೈತಿಕ ಶಕ್ತಿಯನ್ನು ಉಡುಗಿಸಿದ್ದಾರೆ. ಯಾರೇ ಕಾನೂನು ಉಲ್ಲಂಘಿಸಿದರೂ ಅವರ ಮೇಲೆ ಕಠಿಣಕ್ರಮ ಕೈಕೊಂಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಪರಾಧಿಗಳನ್ನು ರಕ್ಷಣೆಮಾಡುತ್ತಿರುವ ಸರಕಾರ ಅಧಿಕಾರಿಗಳಿಗೆ ಬಿಗಿ ಕ್ರಮ ಜರುಗಿಸಲು ಬಿಡುತ್ತಿಲ್ಲ.
ಅಲ್ಲದೆ ಗೃಹಸಚಿವ ಪರಮೇಶ್ವರ್ ಅವರಿಗೆ ಕೆಟ್ಟ ಹೆಸರು ತರುವ ಹುನ್ನಾರವೂ ಇರಬಹುದೇನೋ. ಈ ಘಟನೆಯನ್ನು ಗಂಭಿರವಾಗಿ ಪರಿಗಣಿಸಿ ಅಧಿಕಾರಿಗಳಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅನುವುಮಾಡಿಕೊಟ್ಟು ಕಾನೂನು ವ್ಯವಸ್ಥೆ ಕಾಪಾಡಲು ಮಾಜಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿ ದ್ದಾರೆ.







