suddibindu.in
ಕುಮಟಾ : ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಎದುರಿಗೆ ಬಂದ ಆಕಳ ಕರು ತಪ್ಪಿಸಲು ಹೋಗಿ ಬೈಕ್ ಪಲ್ಟಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದೀವಳ್ಳಿಯಲ್ಲಿ ನಡೆದಿದೆ.
ಕೆಕ್ಕಾರದ ರತ್ನಾಕರ ರಾಮ ಗೌಡ (27) ಗಂಭೀರವಾಗಿ ಗಾಯಗೊಂಡ ಯುವಕನಾಗಿದ್ದಾನೆ. ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ ಆಕಳು ಕರು ಒಂದು ಅಡ್ಡ ಬಂದಿದೆ. ಈ ವೇಳೆ ಬೈಕ್ ಸವಾರ ಆಕಳು ಕರುವನ್ನ ತಪ್ಪಿಸಲು ಪ್ರಯತ್ನಿಸಿದ್ದಾನೆ.
ಇದನ್ನೂ ಓದಿ
- ರೇಬೀಸ್ ಹೋರಿಯಿಂದ ರಂಪಾಟ: ವ್ಯಕ್ತಿಗೆ ತಿವಿತ
- 85 ಸಾವಿರ ನಗದು, ಚಿನ್ನ ಕದ್ದ ಆರೋಪಿ ಬಂಧನ
- ಅರ್ಪಿತಾಗೆ ವಿಟಿಯುನಿಂದ ಡಾಕ್ಟರೇಟ್
ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನಿಗೆ ತಕ್ಷಣ ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.