suddibindu.in
ಜೋಯಿಡಾ : ಶಾಲೆಗೆ ಹೋಗಲು ಬೇಸತ್ತು ವಿದ್ಯಾರ್ಥಿ ಓರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಜೊಯಿಡಾ ರಾಮನಗರದ ಹನುಮಾನ ಗಲ್ಲಿಯಲ್ಲಿ ಘಟನೆ ನಡೆದಿದೆ.

ಲೋಂಡಾದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ವರ್ಷ 5ನೇ ತರಗತಿಗೆ ಹೋಗಬೇಕಿದ್ದ 11ವರ್ಷದ ವಿದ್ಯಾರ್ಥಿಯೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ತಾಯಿ ಗೋವಾದಲ್ಲಿ ಕೆಲಸಕ್ಕೆ ಹೋಗಿದ್ದು, ತಂದೆ ಮಲಗಿದ್ದ ವೇಳೆ ವಿದ್ಯಾರ್ಥಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌.ಈತ ಶಾಲೆಗೆ ಹೋಗುವುದಿಲ್ಲವೆಂದು ಹಠ ಹಿಡಿಯುತ್ತಿದ್ದ ಎನ್ನಲಾಗಿದೆ.ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು