suddibindu.in
ಬೆಂಗಳೂರು :ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರದ ಪ್ರಕರಣ ದಾಖಲಾಗುತ್ತಿದ್ದಂತೆ ವಿದೇಶಕ್ಕೆ ಪರಾರಿಯಾಗಿ ತಲೆ ಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ ಅವರನ್ನ ಎಸ್ಐಟಿ ತಂಡ ತಡ ರಾತ್ರಿ 2-10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ (Kempegowda Airport) ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನ ಬಂಧಿಸಲಾಗಿದೆ.
ಲೋಕಸಭಾ ಚುನಾವಣೆ ಬಳಿಕ. ಏಪ್ರಿಲ್ 27ರಂದು ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ಜರ್ಮನಿಗೆ ತೆರಳಿದ್ದರು,ಇವರು ವಿದೇಶಕ್ಕೆ ಪರಾರಿಯಾದ ಬಳಿಕ ಇಬ್ಬರೂ ಸಂತ್ರಸ್ತೆಯರೂ ಪ್ರಜ್ವಲ್ ರೇವಣ್ಣ ವಿರುದ್ದ ಹಾಸನದ ಹೊಳೆನರಸಿಂಹ ಪುರದಲ್ಲಿ ಪ್ರಕರಣ ಲೈಂಗಿಕ ಹಾಗೂ ಅಚ್ಯಾರ ಪ್ರಕರಣ ದಾಖಲಿಸಲಾಗತ್ತೆ. ಆದರೆ ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಎಸ್ ಐಟಿ ತಂಡವನ್ನ ರಚನೆ ಮಾಡಲಾಗಿತ್ತು. ಆದರೆ ವಿದೇಶದಲ್ಲಿ ಇರುವ ಕಾರಣ ಬಂಧನ ಸಾಧ್ಯವಾಗಿರಲಿಲ್ಲ.
ಇದನ್ನೂ ಓದಿ
- Bhatkal/ಭಟ್ಕಳ ರಾಶಿ ರಾಶಿ ಮೂಳೆ ಪತ್ತೆ ಪ್ರಕರಣ : ಸುದ್ದಿ ಪ್ರಸಾರವಾಗುತಿದ್ದಂತೆ ಎಚ್ಚೆತ್ತ ಅಧಿಕಾರಿಗಳು
- ದಿನಕರರು ದೇಶ ವಿದೇಶಗಳಲ್ಲಿ ಕನ್ನಡವನ್ನು ಪಸರಿಸಿದ ಕನ್ನಡದ ಕಟ್ಟಾಳು : ರಮೇಶ್ ಗೌಡ ಕಡಮೆ
- ಶಾಸಕ ಸತೀಶ್ ಸೈಲ್ ಗೆ ಮಧ್ಯಂತರ ಜಾಮೀನು
ವಿದೇಶಕ್ಕೆ ಪರಾರಿಯಾದ ಒಂದು ತಿಂಗಳ ಬಳಿಕ ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು.ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಅಲರ್ಟ್ ಆಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟು ಪ್ರಜ್ವಲ್ ರೇವಣ್ಣ ಅವರನ್ನ ಬಂಧಿಸಲಾಗಿದೆ. ಇದೀಗ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದಿರುವ ಎಸ್ಐಟಿ ಪೊಲೀಸರು ಎಸ್ಐಟಿ ಕಚೇರಿಗೆ ಕರೆತಲಾಗಿದೆ..