suddibindu.in
ಕಾರವಾರ : ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ (ex cm Kumaraswamy) ಅವರು ಇಂದು ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಉತ್ತರಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡ ಸೂರಜ ನಾಯ್ಕ ಸೋನಿ ಅವರು ಪ್ರಮಾಣ ವಚನ ಸ್ವೀಕಾರ ಸಂದರ್ಭದಲ್ಲಿ ಹಾಜರಿದ್ದು, ಅಭಿನಂದಿಸಿದರು.
ಇಂದು ರಾತ್ರಿ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಚ್ ಡಿ ಕುಮಾರಸ್ವಾಮಿ ಅವರಿಗೆ ಪತಿಜ್ಞಾವಿಧಿ ಬೋಧಿಸಿದರು.ಸರತಿಯಲ್ಲಿ 9ನೇಯವರಾಗಿ ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಎಂಟು ಜನ ಬಿಜೆಪಿ ನಾಯಕರು ಪ್ರಮಾಣ ಸ್ವೀಕರಿಸಿದ ನಂತರ ಎನ್‌ಡಿಎ ಒಕ್ಕೂಟದ ಮಿತ್ರಪಕ್ಷಗಳಲ್ಲಿ ಮೊದಲಿಗರಾಗಿ ಕುಮಾರಸ್ವಾಮಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಇದನ್ನೂ ಓದಿ
- ಚಲಿಸುತ್ತಿದ್ದ ರೈಲಿನಿಂದ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು – ಮಿರ್ಜಾನ ಸಮೀಪ ದಾರುಣ ಘಟನೆ
- ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಮತ್ತೆ ಜೀವ ಬೆದರಿಕೆ
- ದಿನಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ : ಪತ್ರಕರ್ತ ಪ್ರಮೋದ ಹರಿಕಾಂತ
ಲೋಕಸಭೆ ಚುನಾವಣೆಯಲ್ಲಿ ಗೆದ್ದ ಇಬ್ಬರು ಜೆಡಿಎಸ್ ಅಭ್ಯರ್ಥಿಗಳಲ್ಲಿ ಒಬ್ಬರಿಗೆ ಮಾತ್ರ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಈ ವೇಳೆ ದೆಹಲಿಗೆ ಹೋಗಿರುವ ಜಿಲ್ಲೆಯ ಜೆಡಿಎಸ್‌ನ ಪ್ರಭಾವಿ ಮುಖಂಡ ಸೂರಜ್ ನಾಯ್ಕ ಸೋನಿ ಅವರು ಕೇಂದ್ರ ಸಚಿವರಾಗಿರುವ ಜೆಡಿಎಸ್ ನಾಯಕ ಕುಮಾರ ಸ್ವಾಮಿ ಅವರನ್ನ ಭೇಟಿಯಾಗಿ ಮೋದಿ ಸಚಿವ ಸಂಪುಟದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ ಅವರನ್ನ ಅಭಿನಂದಿಸಿದ್ದು, ಬಳಿಕ ನಡೆದ ಔತಣ ಕೂಟದಲ್ಲಿ ಸಹ ಸೋನಿ ಅವರು ಪಾಲ್ಗೊಂಡಿದ್ದರು.