suddibindu.in
Karwar: ಕಾರವಾರ : ಉತ್ತರಕನ್ನಡ ಜಿಲ್ಲೆಯ( Uttar Kannada district) ಕರಾವಳಿ ತಾಲೂಕು ಸೇರಿದಂತೆ ಜಿಲ್ಲಾದ್ಯಂತ ಕಳೆದ ಮೂರು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹವಮಾನ ಇಲಾಖೆ ನಾಳೆ ಜಿಲ್ಲಾದ್ಯಂತ ರೆಡ್ ಅಲರ್ಟ್(Red alert) ಘೋಷಣೆ ಮಾಡಿದೆ.
ಜಿಲ್ಲೆಯ ಕಾರವಾದಿಂದ ಹಿಡಿದು ಕರಾವಳಿ ತಾಲೂಕು ಸೇರಿ ಮಲೆನಾಡು ಹಾಗೂ ಬಯಲು ಸೀಮೆ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದಲೂ ಮಳೆ ಆರ್ಭಟ ಜೋರಾಗಿದೆ. ಎರಡು ದಿನಗಳ ಕಾಲ ಸುರಿದ ಮಳೆಯಿಂದ ಜಿಲ್ಲೆಯ ಅನೇಕ ಕಡೆಯಲ್ಲಿ ಮಳೆ ಈಗಾಗಲೇ ಸಾಕಷ್ಟು ಅವಾಂತರ ಸೃಷ್ಟಿ ಮಾಡಿದೆ. ಇನ್ನೂ ಸಹ ಮೂರು ದಿನಗಳ ಕಾಲ ಜಿಲ್ಲಾದ್ಯಂತ ವ್ಯಾಪಕ ಮಳೆ ಉಂಟಾಗಲಿದ್ದು, ತಗ್ಗು ಪ್ರದೇಶದ ಜನ ಎಚ್ಚರಿಕೆಯಿಂದ ಇರುವಂತೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ
- ಡಿ ಕೆ ಶಿವಕುಮಾರ ಪಿಎಸ್ ಕಾರು ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

- ಉತ್ತರ ಕನ್ನಡದಲ್ಲಿ ನಾಳೆ ಡಿಸಿಎಂ ಡಿಕೆ ಶಿವಕುಮಾರ್ ಏಕಾಂತ ಪೂಜೆ

- ಮಹಿಳಾ ಪೊಲೀಸ್ ಅಧಿಕಾರಿ ಕುತ್ತಿಗೆಯಿಂದ 60 ಗ್ರಾಂ ಚಿನ್ನ ಎಗರಿಸಿದ ಕಳ್ಳ

ಭಾರೀ ಮಳೆ ಆಗಲಿರುವ ಕಾರಣ ಮೀನುಗಾರರು ಮೀನುಗಾರಿಕೆಗಾಗಿ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಇನ್ನೂ ಜಿಲ್ಲೆಗೆ ಬರುವ ಪ್ರವಾಸಿಗರು ಕಡಲತೀರ ಹಾಗೂ ಜಲಪಾತ ಕಡೆ ಹೋಗದಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.


