suddibindu.in
ಮೈಸೂರು:ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಿತ್ರದುರ್ಗ ನಿವಾಸಿ ರೇಣುಕಾ ಸ್ವಾಮಿ ಎಂಬವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಅವರನ್ನು ಮೈಸೂರಿನಲ್ಲಿರುವ ಫಾರ್ಮ್ ಹೌಸ್ನಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜೂನ್ 8ರಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ವ್ಯಾಪ್ತಿಯ ಶೆಡ್ನಲ್ಲಿ ರೇಣುಕಾಸ್ವಾಮಿ ಎಂಬುವವರ ಕೊಲೆ ಮಾಡಲಾಗಿತ್ತು.ರೇಣುಕಾಸ್ವಾಮಿ ಅವರನ್ನ ನಟ ದರ್ಶನ್ ಸೂಚನೆ ಮೇಲೆ ಈ ಕೊಲೆ ಮಾಡಿದರುವ ಬಗ್ಗೆ ಆರೋಪ ಕೇಳಿ ಬಂದಿದ್ದು,ಈ ಹಿನ್ನಲೆಯಲ್ಲಿ ನಟ ದರ್ಶನ ಅವರನ್ನ ಬಂಧನ ಮಾಡಲಾವಿದೆ.
ಇದನ್ನೂ ಓದಿ
- ಅರ್ಪಿತಾಗೆ ವಿಟಿಯುನಿಂದ ಡಾಕ್ಟರೇಟ್
- ಬಡತನದ ನಡುವೆಯೂ CA ಸಾಧನೆ: ಶಿರಸಿಯ ಹಳ್ಳಿಕಾನಿನ ರಮೇಶ್ ನಾಯ್ಕ್ ಅವರ ಸ್ಪೂರ್ತಿದಾಯಕ ಯಶೋಗಾಥೆ
- ವಾರದ_ಕಥನ…ಕಾಣದ-ಬಿಂಬ ೩, ಸುಬ್ಬಮ್ಮ ಅನಾಥೆಯಲ್ಲ
ಈ ಬಗ್ಗೆ ತನಿಖೆ ನಡೆಸಿರುವ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ ಆರೋಪದಲ್ಲಿ ನಟ ದರ್ಶನ್ ಸಹಿತ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.