ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕ ಮಾಡಲು ರಾಜ್ಯ ಸರಕಾರ ಮುಂದಾಗಿದೆ.ಸುಮಾರು 17,000+ ಖಾಲಿ ಇದ್ದು; ಈ ಪೈಕಿ ಎಸ್‌ಆರ್‌ಪಿಸಿ ಹಾಗೂ ಕೆಎಸ್‌ಆರ್‌ಪಿ ಪಡೆಯಲ್ಲಿ ಖಾಲಿ ಇರುವ 1,500 ಹುದ್ದೆಗಳ ಭರ್ತಿ ಅತೀ ಶೀಘದಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ (Karnataka State Reserve Police- KSRP) ಹಾಗೂ ವಿಶೇಷ ಮೀಸಲು ಪೊಲೀಸ್ ಪಡೆಯಲ್ಲಿ (Special Reserve Police Force- SRPC) ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಪೊಲೀಸ್ ಇಲಾಖೆ ಸನ್ನದ್ದವಾಗಿದೆ. ರಾಜ್ಯ ಸರಕಾರ ಈಗಾಗಲೇ ಈ ಎರಡೂ ಪಡೆಯ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ
- ಚಿತ್ತಾಕೂಲಕ್ಕೆ ನೂತನ ಪಿಎಸ್ಐ ಆಗಿ ಪರಶುರಾಮ್ ಮಿರ್ಜಿಗಿ, ಮುಂಡಗೋಡಕ್ಕೆ ಮಾಹಾಂತೇಶ್ ವಾಲ್ಮೀಕಿ ನೇಮಕ
- ದಸರಾ ಉದ್ಘಾಟನೆ ವಿವಾದಕ್ಕೆ ಫುಲ್ಸ್ಟಾಪ್ : ಬಾನು ಮುಷ್ತಾಕ್ ಆಯ್ಕೆಗೆ ಹೈಕೋರ್ಟ್ ಹಸಿರು ನಿಶಾನೆ
- ಕಾರವಾರ ನಗರದ ಹೃದಯಭಾಗದಲ್ಲೇ ಕೆಟ್ಟು ನಿಂತ ಬಸ್ : ಪ್ರಯಾಣಿಕರಿಗೆ ನಿತ್ಯವೂ ನರಕಯಾತನೆ
ಕರ್ನಾಟಕ ರಾಜ್ಯ ಸರಕಾರ (Karnataka State Govt) ಹೊರಡಿಸಿರುವ ಆದೇಶದ ಅನ್ವಯ ನೇಮಕಾತಿ ಪ್ರಕ್ರಿಯೆ ನಡೆಸಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿವಿಧ ಮೀಸಲು ಪಡೆಗಳ ಕಮಾಂಡೆಂಟ್‌ಗಳಿಂದ ಸಮಗ್ರ ವಿವರಗಳನ್ನು ಕೋರಿದೆ.
ಹುದ್ದೆಗಳ ವಿವರ
ಕಲ್ಯಾಣ ಕರ್ನಾಟಕೇತರ ಹುದ್ದೆಗಳು : 886
ಕಲ್ಯಾಣ ಕರ್ನಾಟಕ ವೃಂದ ಹುದ್ದೆಗಳು : 614
ಒಟ್ಟು ಹುದ್ದೆಗಳು : 1,500
ಕ್ರೀಡಾಪಟುಗಳಿಗೆ ಮೀಸಲಾತಿ
ಒಟ್ಟು 1,500 ಹುದ್ದೆಗಳಲ್ಲಿ 30 ಹುದ್ದೆಗಳನ್ನು ಪ್ರತಿಭಾವಂತ ಕ್ರೀಡಾ ಪಟುಗಳಿಗಾಗಿ ಮೀಸಲಿಡಲಾಗಿದೆ. ಇದರಲ್ಲಿ 12 ಹುದ್ದೆಗಳು ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗಾಗಿ ನಿಗದಿಪಡಿಸಲಾಗಿದೆ. ಒಟ್ಟಾರೆ ಅನುಮೋದನೆ ನೀಡಲಾದ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸಲು ನೇರ ಮತ್ತು ಸಮತಲ ವರ್ಗೀಕರಣವನ್ನು ನೀಡುವಂತೆ ಕಮಾಂಡೆಂಟ್‌ಗಳಿಗೆ ನಿರ್ದೇಶನ ನೀಡಲಾಗಿದೆ.