ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಎದುರಿಸುತ್ತಿದ್ದ, ಪೋಕ್ಸೊ ಕೇಸ್‌ನಲ್ಲಿ (POCSO Case) ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyurappa) ಅವರಿಗೆ ಕರ್ನಾಟಕ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ.

ಮುಂದಿನ ವಿಚಾರಣೆ ಆಗುವವರೆಗೆ ಪೋಕ್ಸೋ ಪ್ರಕರಣದ ಆರೋಪ ಎದುರಿಸುತ್ತಿರುವ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು‌ ಆದೇಶಿಸಿದೆ.ಇದರಿಂದಾಗಿ, ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಂತಾಗಿದೆ. ಈ ಪ್ರಕರಣದ ವಿಚಾರಣೆಯನ್ನು ಎರಡು ವಾರ ಮುಂದೂಡಲಾಗಿದೆ.

ಇಸನ್ನೂ ಓದಿ

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ನಗರದ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು

ಯಡಿಯೂರಪ್ಪ ಅವರ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್‌ ಅವರು ವಾದ ಮಂಡಿಸಿದರು. “ಪೋಕ್ಸೊ ಕೇಸ್‌ಗೆ ಸಂಬಂಧಿಸಿದಂತೆ ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ. ಒಂದು ಪ್ರಕರಣವನ್ನು ರದ್ದುಗೊಳಿಸುವಂತೆ ಹಾಗೂ ಇನ್ನೊಂದು ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ. ಆಕೆಯ ವೃತ್ತಿಯೇ ಬೇರೆಯವರ ವಿರುದ್ಧ ಕೇಸ್‌ ದಾಖಲಿಸುವುದಾಗಿದೆ. ಇದುವರೆಗೆ ಮಹಿಳೆ ಐವತ್ತು ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ ಎನ್ನಲಾಗಿದೆ.