suddibindu.in
ಜೋಯಿಡಾ : ತಾಲೂಕಿನ ರಾಮನಗರ ಪೊಲೀಸ್ ಠಾಣೆಯ ಪಿಎಸ್ಐಯವರಿಂದಾದ ದೌರ್ಜನ್ಯವನ್ನು ಖಂಡಿಸಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡಿದ್ದ ಯುವಕ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ರಾಮನಗರದ ಹನುಮಾನ್ ಗಲ್ಲಿಯ ನಿವಾಸಿಯಾಗಿರುವ ಭಾಸ್ಕರ್ ಬೊಂಡಲ್ಕರ್ ಎಂಬಾತನೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಯುವಕನಾಗಿದ್ದಾನೆ.

ಇದನ್ನೂ ಓದಿ

ಈತ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಜೂನ್ : 13 ರಂದು ಸಂಜೆ ರಾಮನಗರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನು. ಘಟನೆ ಗುರುವಾರ ಸಂಜೆ ಸುಮಾರಿಗೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಆತನನ್ನು ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.