suddibindu.in
ಕಾರವಾರ : ಲೋಕಸಭಾ ಚುನಾವಣೆ ಮುಗಿದು ಕೇಂದ್ರದಲ್ಲಿ ಮೋದಿ ಮೈತ್ರಿ ಆಡಳಿಡ ಆರಂಭವಾದ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿ ಮತ್ತೆ ಅಪರೇಷನ್ ಕಮಲದ ಸದ್ದು ಕೇಳಿ ಬರಲಾರಂಭಿಸಿದೆ. ಈಗಾಗಲೇ ಕಾಂಗ್ರೆಸ್‌ನ 50 ಕ್ಕೂ ಹೆಚ್ಚು ಶಾಸಕರನ್ನ ಸೆಳೆಯಲು ಕಮಲ ಪಡೆ ಮುಂದಾಗಿದೆ ಎನ್ನುವ ಮಾತು ರಾಜಕೀಯ ವಲಯದಲ್ಲಿ ಜೋರಾಗಿ ಚರ್ಚೆಯಾಗುತ್ತಿದೆ.
ಈಗಾಗಲೆ ಸಿದ್ದರಾಮಯ್ಯ ಸಿ ಎಂ ಆಗಿ ಒಂದು ವರ್ಷ ಆಗಿದ್ದು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಬಿಟ್ಟರೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ರಾಜ್ಯದ ಪ್ರತಿಯೊಂದು ಕ್ಷೇತ್ರದ ಶಾಸಕರು ಅಭಿವೃದ್ಧಿಗಾಗಿ ರಾಜ್ಯ ಸರಕಾರದಿಂದ ಹಣ ಬಿಡುಗಡೆಯಾಗದೆ ಇರುವ ಕಾರಣ ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲು ಸಾಧ್ಯವಾಗದೆ ಹೆಸರಿಗಷ್ಟೆ ಶಾಸಕರಾಗಿ ಉಳಿಯುವಂತಾಗಿದೆ. ಇದರಿಂದಾಗಿ ಕ್ಷೇತ್ರದ ಮತದಾರು ಶಾಸಕರಾದವರಿಗೆ ಹಿಡಿಶಾಪ ಹಾಕುವಂತ ಪರಿಸ್ಥಿತಿ ಉಂಟಾಗಿದೆ. ಅಷ್ಟೆ ಅಲ್ಲದೆ ಅಭಿವೃದ್ಧಿಗೆ ಸರಕಾರ ಹಣ ಬಿಡುಗಡೆ ಮಾಡದೆ ಇರುವ ಕಾರಣ ಶಾಸಕರಿಗೂ ತಲೆನೋವಾಗಿದೆ.
ಇದನ್ನೂ ಓದಿ
- ಅಪಘಾತ ನಿಯಂತ್ರಣಕ್ಕೆ ಕುಮಟಾದಲ್ಲಿ ಬಿಗ್ ಆಕ್ಷನ್ : ನಿಯಮ ಮೀರಿ ವಾಹನ ಓಡಿಸಿದ್ರೆ ಕಾನೂನು ಕ್ರಮ
- ಸುಗಮವಾಗಿ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸಲು ಎಸ್ಪಿಗೆ ರೂಪಾಲಿ ನಾಯ್ಕ ಮನವಿ
- ದಿನಕರ ಶೆಟ್ಟಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಬಂಧನ
ರಾಜ್ಯದಲ್ಲಿನ ರಾಜಕೀಯ ವಿದ್ಯಮಾನಗಳನ್ನ ಗಮಸಿರುವ ಕೇಂದ್ರದ ಬಿಜೆಪಿ ನಾಯಕರು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಸಹ ಆ ಪಕ್ಷದ ಶಾಸಕರ ಕಷ್ಟಗಳನ್ನ ಚೆನ್ನಾಗಿಯೇ ಅರ್ಥೈಸಿಕೊಂಡ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರಿಗೆ ಒಂದಿಷ್ಟು ಆಪರ್ ನೀಡುವ ಮೂಲಕ ಕರ್ನಾಟಕದ 50ಕ್ಕೂ ಅಧಿಕ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಕಮಲದ ಮೂಲಕ ಸೆಳೆಯಲು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದಾರೆನ್ನಲಾಗಿದೆ. ಕರ್ನಾಟಕದಲ್ಲಿ ಈ ಬಾರಿ ಮಹಾರಾಷ್ಟ್ರ ಮಾದರಿಯಲ್ಲಿ ಆಪರೇಷನ್ ಕಮಲ ನಡೆಸಲು ಬಿಜೆಪಿ ತಯಾರಿ ನಡೆಸಿದೆ.