Hubli news: ಹುಬ್ಬಳ್ಳಿ: ಶಿಕ್ಷಕರ ವರ್ಗಾವಣೆಯಲ್ಲಿ ನಗರ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರ ಲಾಬಿಗೆ ಮಣಿದು ವಲಯ ವರ್ಗಾವಣೆ (ಕಡ್ಡಾಯ ವರ್ಗಾವಣೆ) ಅಂದರೆ ಸತತ ಹತ್ತು ವರ್ಷಕ್ಕೂ ಹೆಚ್ಚು ಕಾಲ ನಗರ ಪ್ರದೇಶಗಳಲ್ಲಿ (ಎಂ ವಲಯ) ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರನ್ನು ಕಡ್ಡಾಯವಾಗಿ ಗ್ರಾಮೀಣ(ಸಿ ವಲಯ)ಪ್ರದೇಶಕ್ಕೂ ಸತತ ಹತ್ತು ವರ್ಷಕ್ಕೂ ಹೆಚ್ಚು ಕಾಲ ಗ್ರಾಮೀಣ ಪ್ರದೇಶದಲ್ಲಿ (ಸಿ ವಲಯ) ಶಿಕ್ಷಕರನ್ನು ನಗರ ಪ್ರದೇಶಕ್ಕೆ ವರ್ಗಾವಣೆ ಮಾಡುವ ಪ್ರಕ್ರಿಯೆಯನ್ನು ಕೈ ಬಿಟ್ಟು ಕೇವಲ ಸಾಮಾನ್ಯ ವರ್ಗಾವಣೆ ಮಾಡಲು ಹೊರಟಿರುವ ಇಲಾಖೆಯ ಕ್ರಮವನ್ನು ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕ ರಿ ಹುಬ್ಬಳ್ಳಿ ವಿರೋಧಿಸುತ್ತದೆ ಎಂದು ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾದ್ಯಕ್ಷರಾದ ಶರಣಪ್ಪಗೌಡ ಆರ್ ಕೆ ಆಗ್ರಹಿಸಿದರು