suddibindu.in
Sirsi:ಶಿರಸಿ :ಸಾಮಾಜಿಕ ಜಾಲತಾಣದಲ್ಲಿ ಕೊಮುಗಲಭೆಗೆ ಉತ್ತೇಜನ ನೀಡಿ ಪೊಸ್ಟ್ ಮಾಡಿದ್ದ ಆರೋಪದಲ್ಲಿ ರಾಷ್ಟ್ರೀಯ ತನಿಖಾ ತಂಡ (NIA) ಓರ್ವ ವ್ಯಕ್ತಿಯನ್ನ ವಶಕ್ಕೆ ಪಡೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ನಡೆದಿದೆ.
ದಾಸನಕೊಪ್ಪ ನಿವಾಸಿಯಾಗಿರುವ ಅಬ್ದುಲ್ ಶಕೂರ ಎಂಬಾತನೆ ಬಂಧಿತ ಆರೋಪಿಯಾಗಿದ್ದಾನೆ ಎನ್ನಲಾಗಿದೆ. ಈತ ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಕೋಮುಗಲಭೆ ಸೃಷ್ಟಿಸುವಂತೆ ಉತ್ತೇಜನ ನೀಡಿ ಪೋಸ್ಟ್ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಆಧರಿಸಿದ ತನಿಖಾ ತಂಡ ಇಂದು ಬನವಾಸಿಗೆ ಆಗಮಿಸಿ ಆತನಿಗೆ ಪ್ರಾಥಮಿಕವಾಗಿ ತನಿಖೆ ನಡೆಸಿದೆ. ಈತ ಬೇರೆ ಬೇರೆ ಸಂಘಟನೆಗಳ ಜೊತೆ ನಂಟು ಹೊಂದಿದ್ದ ಎನ್ನಲಾಗಿದೆ. ಹೀಗಾಗಿ ಹೆಚ್ಚಿನ ತನಿಖೆಗಾಗಿ ಆತನನ್ನ ಬೆಂಗಳೂರಿಗೆ ಕರೆದೊಯ್ಯಲಾಗಿದೆ.
ಇದನ್ನೂ ಓದಿ