suddibindu.in
ಬೆಂಗಳೂರು
: ಜನವರಿ-26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ ಭಾರತ ರತ್ನ ಡಾ|| ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಲು ಸೂಚಿಸಲು ಸಚಿವ ಸಂಪುಟ ನಿರ್ಧರಿಸಿದೆ. ಹಾಗೂ ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಭಾರತ ರತ್ನ ಡಾ|| ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಇರಿಸಲು ಸಚಿವ ಸಂಪುಟ ನಿರ್ಧರಿಸಿದೆ.