suddibindu.in
ಕಾರವಾರ: ಕರಾವಳಿಯಲ್ಲಿ ಕೆಲವು ದಿನಗಳಿಂದ ಕಣ್ಮರೆಯಾಗಿದ್ದ ಮಳೆ ಇದೀಗ ಮತ್ತೆ ಪ್ರಾರಂಭವಾಗುವ ಮುನ್ಸೂಚನೆ ದೊರೆತಿದ್ದು, ಜೂನ್ 22 ರಿಂದ 23ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದ್ದು, ಅರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಮುಂಗಾರು ಮಳೆ ಪ್ರಾರಂಭವಾದ ಬಳಿಕ ಕಳೆದ ಒಂದು ವಾರದಿಂದ ಕೊಂಚ ಕಡಿಮೆಯಾಗಿದ್ದ ವರುಣ, ಇದೀಗ ಮತ್ತೆ ಪ್ರಾರಂಭವಾಗುವ ಸಾಧ್ಯತೆ ಇದ್ದು, ಜೂನ್ 22 ರಿಂದ 23 ರವರೆಗೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ., ಇನ್ನೂ ಕರಾವಳಿಯಲ್ಲಿ ಗುಡ್ಡ ಸಹ ಕುಸಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀದೆ. ಹೀಗಾಗಿ ಗುಡ್ಡ ಪ್ರದೇಶದಲ್ಲಿನ ಜನ ಜಾಗೃತರಾಗಿರಬೇಕಿದೆ.