suddibindu.in
ಕುಮಟಾ : ಉತ್ತರಕನ್ನಡ ಜಿಲ್ಲೆಯ ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ಸಹೋದರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಪಟ್ಟಣದ ಕೊಪ್ಪಳಕರವಾಡಿಯಲ್ಲಿ ನೆಲೆಸಿರುವ ಶಾಸಕ ದಿನಕರ ಶೆಟ್ಟಿ ಅವರ ಸಹೋದರ ಮಧುಕರ ಶೆಟ್ಟಿ ಅವರ ಮನೆಯಲ್ಲಿ ಆಕಸ್ಮಿಕವಾಗಿ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ.ಮನೆಯಲ್ಲಿ ಸಿಲಿಂಡರ್ ಸ್ಟೋಟದಿಂದ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಮನೆಯಲ್ಲಿದ್ದವರು ಹೊರ ಓಡಿ ಬಂದಿದ್ದು, ತಕ್ಷಣ ಅಗ್ನಿಶಾಮಕ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರ ಬೆಂಕಿ ನಂದಿಸಿದ್ದಾರೆ.

ಬೆಂಕಿಯಿಂದಾಗಿ ಕೆಲ ಗೋಡೆಗಳಿಗೆ ಹಾನಿ ಉಂಟಾಗಿದ್ದು, ಅಡುಗೆ ಮನೆಯಲ್ಲಿನ ಸಾಮಗ್ರಿಗಳು ಹಾನಿಗೊಳಗಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎನ್ನಲಾಗಿದೆ.