suddibindu.in
ಶಿರಸಿ : ಉತ್ತರಕನ್ನಡ ಜಿಲ್ಲೆಯ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ ಹೆಗಡೆಯವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ಸಾಮಗ್ರಿಗಳು ಸುಟ್ಟು ಹೋದ ಘಟನೆ ನಡೆದಿದೆ.fire broke out in the house of former MP Anantakumar Hegade,
ಶಿರಸಿ ನಗರದ ಕೆ ಎಚ್ ಬಿ ಕಾಲೋನಿಯಲ್ಲಿರುವ ಅನಂತಕುಮಾರ ಹೆಗಡೆಯವರ ಮನೆಯ ಮೇಲಭಾಗದ ಜಿಮ್ ನಲ್ಲಿ ಇಂದು ಬೆಳಿಗ್ಗೆ 4-30 ಗಂಟೆಗೆ ಬೆಂಕಿ ಕಾಣಿಸಿತ್ತು. ಪರಿಣಾಮವಾಗಿ ಜಿಮ್ ಉಪಕರಣಗಳು ಸುಟ್ಟು ಸುಟ್ಟು ಹೋಗಿದೆ. ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ
- ತರಕಾರಿ ತುಂಬಿದ ಲಾರಿ ಪಲ್ಟಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ
- gold rate/ ಚಿನ್ನ, ಬೆಳ್ಳಿ ದರ ದಸರಾ ವೇಳೆ ಇಳಿಕೆ ಸಾಧ್ಯತೆ
- ಏರ್ ಇಂಡಿಯಾ ವಿಮಾನ ದುರಂತ : ಗೋಕರ್ಣದಲ್ಲಿ ಪಿಂಡಪ್ರದಾನ
ಮಾಜಿ ಸಂಸದರು ಮತ್ತು ಕುಟುಂಬದವರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಆಗಿರಬಹುದೆಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಬೆಂಕಿನಂದಿಸಿದ್ದಾರೆ.