suddibindu.in
ಕಾರವಾರ :
ಭಾರೀ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಓರ್ವರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ನಡೆದಿದೆ. ಗುಲಾಬಿ ರಾಮಚಂದ್ರ ಮಾಂಜ್ರೇಕರ್(70) ಮೃತ ದುರ್ದೈವಿ ವೃದ್ಧೆಯಾಗಿದ್ದಾಳೆ. ವೃದ್ದೆ ಓರ್ವಳೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದಳು. ಈಕೆ ಚಿತ್ತಾಕುಲದಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದು, ನಿನ್ನೆ ಮಧ್ಯಾಹ್ನ ಮನೆಯ ಪಕ್ಕದ ಹಳೆಯ ಕಟ್ಟಡದ ಬಳಿ ತೆರಳಿದ್ದಾಗ ಗೋಡೆ ಕುಸಿತವಾಗಿದೆ. ಭಾರೀ ಮಳೆಗೆ ನೆನೆದ ಮಣ್ಣಿನ ಗೋಡೆ ಮೈಮೇಲೆ ಕುಸಿದು ಬಿದ್ದು ವೃದ್ಧೆ ಮೃತಪಟ್ಟಿದ್ದಾಳೆ. ಗೋಡೆಯಡಿ ವೃದ್ಧೆ ಸಂಪೂರ್ಣ ಮುಚ್ಚಿದ್ದರಿಂದ ಅವಘಡ ಇಂದು ಬೆಳಕಿಗೆ ಬಂದಿದೆ.ಸ್ಥಳಕ್ಕೆ ತಹಶೀಲ್ದಾರ್ ನಿಶ್ಚಲ ನೊರೋನ್ಹಾ, ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ