suddibindu.in
ಭಟ್ಕಳ : T20 ವಿಶ್ವಕಪ್‌ನ ಫೈನಲ್ (T20 World Cup Final) ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು (South Africa) ಸೋಲಿಸುವ ಮೂಲಕ ಭಾರತ ರೋಚಕ ಇತಿಹಾಸ ನಿರ್ಮಿಸಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ (Team India)ತಂಡ ಐತಿಹಾಸಿಕ ಗೆಲುವು ಸಾಧಿಸಿದ್ದು, ಈ ಅಭೂತಪೂರ್ವ ಗೆಲುವಿಗೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲೂ ಸಂಭ್ರಮಾಚರಣೆ ಮನೆ ಮಾಡಿತ್ತು.
ಟೀಂ ಇಂಡಿಯಾ ಗೆಲುವಿನ ಸಂಭ್ರಮವನ್ನು ದೇಶದ ಮೂಲೆ ಮೂಲೆಯಲ್ಲೂ ಆಚರಿಸಲಾಗ್ತಿದ್ದು, ಭಟ್ಕಳದಲ್ಲಿ ಭಾರತದ ಗೆಲುವನ್ನ ಕ್ರಿಕೆಟ್ ಪ್ರೇಮಿಗಳು ಸಂಭ್ರಮಿಸಿದರು, ಭಟ್ಕಳದ ಸಂಶುದ್ದೀನ್ ವೃತ್ತದಲ್ಲಿ ತಡರಾತ್ರಿ ನೂರಾರು ಸಂಖ್ಯೆಯಲ್ಲಿ ಹೆದ್ದಾರಿಯಲ್ಲಿ ಜಮಾಯಿಸಿದ ಕ್ರಿಕೆಟ್ ಪ್ರೇಮಿಗಳು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳ ಎದುರು ಕುಣಿದು ಕುಪ್ಪಳಿಸಿ ಸಂಭ್ರ ಆಚರಿಸಿಕೊಂಡರು.
ಇದನ್ನೂ ಓದಿ
- Bhatkal/ಭಟ್ಕಳ ರಾಶಿ ರಾಶಿ ಮೂಳೆ ಪತ್ತೆ ಪ್ರಕರಣ : ಸುದ್ದಿ ಪ್ರಸಾರವಾಗುತಿದ್ದಂತೆ ಎಚ್ಚೆತ್ತ ಅಧಿಕಾರಿಗಳು
- ದಿನಕರರು ದೇಶ ವಿದೇಶಗಳಲ್ಲಿ ಕನ್ನಡವನ್ನು ಪಸರಿಸಿದ ಕನ್ನಡದ ಕಟ್ಟಾಳು : ರಮೇಶ್ ಗೌಡ ಕಡಮೆ
- ಶಾಸಕ ಸತೀಶ್ ಸೈಲ್ ಗೆ ಮಧ್ಯಂತರ ಜಾಮೀನು
ಭಾರತದ ಬಾವುಟ ಹಿಡಿದು ಯುವಕರು, ಮಕ್ಕಳು ಸೇರಿ ನೂರಾರು ಸಂಖ್ಯೆಯಲ್ಲಿದ್ದರು. ಸಂಭ್ರಮಾಚರಣೆ ಹಿನ್ನಲೆ ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತ ಕೂಡ ಉಂಟಾಗಿತ್ತು. ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಿಕೆಟ್ ಪ್ರೇಮಿಗಳನ್ನ ಚದುರಿಸಿದ ಪೊಲೀಸರು ಅರ್ಧ ಗಂಟೆಗೂ ಹೆಚ್ಚು ಕಾಲ ಹೆದ್ದಾರಿಯಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಹೆದ್ದಾರಿಯಲ್ಲಿ ಸಂಭ್ರಮಾಚರಣೆ ಮಾಡಿರುವುದರಿಂದ ಕ್ರಿಕೆಟ್ ಪ್ರೇಮಿಗಳನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.




