suddibindu.in
ಕಾರವಾರ :ಮನೆಯಲ್ಲಿ ಯಾರು ಇಲ್ಲದ ವೇಳೆ ಬೀಗ ಮುರಿದು ಮನೆಯಲ್ಲಿದ್ದ ಲಕ್ಷಾಂತರ ರೂ ನಗದು ಹಾಗೂ ಬಂಗಾರ ಕಳ್ಳತನ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗದ ನಿವೃತ್ತ ಪೊಲೀಸ್ ಒಬ್ಬರ ಮನೆಯಲ್ಲಿ ನಡೆದಿದೆ.
ಕೋಡಿಭಾಗದ ಮಾರುತಿ ಅಪ್ಪು ನಾಯಕ ಅವರ ಮನೆ ಕಳ್ಳತವಾಗಿದೆ.ಇವರು ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಮುಂದಿನ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳ ಮನೆಯ ಕಪಾಟಿನಲ್ಲಿದ್ದ ಎರಡು ಲಕ್ಷ ನಗದು ಹಾಗೂ 15ತೊಲೆ ಬಂಗಾರ ಕಳ್ಳತನ ಮಾಡಲಾಗಿದೆ.
ಇದನ್ನೂ ಓದು
- ತರಕಾರಿ ತುಂಬಿದ ಲಾರಿ ಪಲ್ಟಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ
- gold rate/ ಚಿನ್ನ, ಬೆಳ್ಳಿ ದರ ದಸರಾ ವೇಳೆ ಇಳಿಕೆ ಸಾಧ್ಯತೆ
- ಏರ್ ಇಂಡಿಯಾ ವಿಮಾನ ದುರಂತ : ಗೋಕರ್ಣದಲ್ಲಿ ಪಿಂಡಪ್ರದಾನ
ಘಟನಾ ಸ್ಥಳಕ್ಕೆ ಶ್ವಾನ ದಳ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.ಈ ಬಗ್ಗೆ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.