suddibindu.in
ಶಿರಸಿ : ಉತ್ತರ ಕನ್ನಡ(uttara Kannada) ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಹುಬ್ಬಳ್ಳಿಯ ಯುವತಿಯೊಬ್ಬಳು ಇತ್ತೀಚಿಗೆ ಅಮೇರಿಕಾದಲ್ಲಿ ಜರುಗಿದ ಜಾಗತಿಕ ಸೌಂದರ್ಯ ಸ್ಪರ್ಧೆಯಲ್ಲಿ(world beauty pageant) ವಿಜೇತಳಾಗಿದ್ದಾಳೆ.
ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ ಅಮೇರಿಕಾದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾಳೆ.(Miss World 2024) ಈಕೆ ಈ ಮೊದಲು 2018ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದಳು. 2023ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಈಕೆ ಅಮೇರಿಕಾದಲ್ಲಿ ನಡೆದ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದಾಳೆ.
ಇದನ್ನೂ ಓದಿ
- sirsi/ನಿಲೇಕಣಿ ರಸ್ತೆಗೆ ಬೇಕಿದೆ ಹೆಲ್ಪ್ಲೈನ್,GPSಗೂ ಗೊಂದಲವಾಗತ್ತಿದೆ
- ಮಳೆಯ ಅಬ್ಬರ : ಕದ್ರಾ ಜಲಾಶಯದಿಂದ ನೀರು ಬಿಡುಗಡೆ
- ಶಿರಸಿ-ವಡ್ಡಿ ಘಟ್ಟ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ
ಹುಬ್ಬಳ್ಳಿಯಲ್ಲಿ ಎಮ್.ಬಿ.ಬಿ.ಎಸ್. ಪೂರೈಸಿರುವ ಡಾ. ಶೃತಿ ಹೆಗಡೆ, ಚರ್ಮ ರೋಗ ತಜ್ಞೆಯಾಗುವ ಹಂಬಲದಿಂದ ತುಮಕೂರಿನಲ್ಲಿ ಎಮ್.ಡಿ. ಅಧ್ಯಯನ ನಡೆಸುತ್ತಿದ್ದಾರೆ. ಈಕೆ ಭರತನಾಟ್ಯ ಕಲಾವಿದೆಯೂ ಆಗಿದ್ದು, ದುಬೈ, ಮಾಲ್ಡೀವ್ಸ್, ಭೂತಾನ್ ಮುಂತಾದ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಡಾ. ಶೃತಿ 2023ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದರು. ಅಮೇರಿಕದ ಪ್ಲೋರಿಡಾದಲ್ಲಿ ಕಳೆದ ಜೂ.6 ರಿಂದ 10 ವರೆಗೆ ಆಯೋಜಿತವಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟು 10 ದೇಶಗಳ ಸುಂದರಿಯರು ಪೈಪೋಟಿಯಲ್ಲಿದ್ದರು. ರಾಷ್ಟ್ರೀಯ ಉಡುಗೆ, ಈಜು ಉಡುಗೆ, ಪ್ರಶ್ನೋತ್ತರ, ವೈಯಕ್ತಿಕ ಸಂದರ್ಶನ ಮುಂತಾದ ವಿವಿಧ ಸುತ್ತುಗಳಲ್ಲಿ ಸ್ಪರ್ಧೆ ಸಾಗಿತ್ತು. ಎಲ್ಲದರಲ್ಲೂ ಉತ್ತಮ ಪ್ರದರ್ಶನ ನೀಡಿದ ಶೃತಿ ಹೆಗಡೆ ಗೆಲುವು ಸಾಧಿಸಿದ್ದಾರೆ.