www.suddibindu.in
ಹೊನ್ನಾವರ: ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ರವರು ಹೊನ್ನಾವರ ತಾಲ್ಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯತಿ ವ್ಯಾಪ್ತಿಯ ನೆರೆ ಪ್ರದೇಶಗಳಿಗೆ ಸಂಬಂದಿಸಿದ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವವವರಿಗೆ ಯಾವುದೇ ಕೊರತೆಯಾಗದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.