suddibindu.in
Karwar: ಕಾರವಾರ:ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ july06 ರಂದು ಜಿಲ್ಲೆಯ ಐದು ತಾಲೂಕಿನ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಪ್ರಕಟಣೆ ಹೊರಡಿಸಿದ್ದಾರೆ
ಕಾರವಾರ,ಅಂಕೋಲಾ,ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನಲ್ಲಿ ಎಲ್ಲಾ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ. ಈ ಐದು ತಾಲೂಕಿನಲ್ಲಿನ ಎಲ್ಲಾ ನದಿ ಸೇರಿದಂತೆ ಹಳ್ಳ ಕೊಳ್ಳಗಳು ಅಪಾಯದ ಮಟ್ಟ ಮಿರಿ ಹರಿಯುತ್ತಿದೆ.ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಐದು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.