www.suddibindu.in
ದಾವಣಗೆರೆ :ಹೆರಿಗೆ ಮಾಡುವ ವೇಳೆ ವೈದ್ಯರು ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನು ಕೊಯ್ದ ಪರಿಣಾಮ ಮಗು ಕಣ್ಣುಬಿಡುವುದಕ್ಕೂ ಮುಂಚೆಯೇ ಸಾವನ್ನಪ್ಪಿರುವ ಘಟನೆ ಜಿಲ್ಲಾ ಆಸ್ಪತ್ರೆಯಲ್ಲಿ ಜುಲೈ 5ರಂದು ನಡೆದಿದೆ.
ಯಡವಟ್ಟಿಗೆ ಆಸ್ಪತ್ರೆಯ ವೈದ್ಯರನ್ನು ಕಾರಣವೆಂದು ಆರೋಪಿಸಲಾಗಿದೆ. ದಾವಣಗೆರೆ ಕೊಂಡಜ್ಜಿ ರಸ್ತೆಯ ನಿವಾಸಿ ಅರ್ಜುನ್ ಅವರ ಪತ್ನಿ ಅಮೃತಾ ಅವರು ಹೆರಿಗೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ನಾರ್ಮಲ್ ಡೆಲಿವರಿ ಸಾಧ್ಯವಾಗದೆ ಸಿಸರಿಯನ್ ಮಾಡಲಾಯಿತು. ಸಿಸರಿಯನ್ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ಮಗುವಿನ ಮರ್ಮಾಂಗಕ್ಕೆ ವೈದ್ಯರಿಂದ ತೊಂದರೆ ಉಂಟಾಗಿದ್ದು, ಇದರಿಂದ ಮಗು ತಕ್ಷಣವೇ ಮೃತಪಟ್ಟಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ
- Bhatkal/ಭಟ್ಕಳ ರಾಶಿ ರಾಶಿ ಮೂಳೆ ಪತ್ತೆ ಪ್ರಕರಣ : ಸುದ್ದಿ ಪ್ರಸಾರವಾಗುತಿದ್ದಂತೆ ಎಚ್ಚೆತ್ತ ಅಧಿಕಾರಿಗಳು
- ದಿನಕರರು ದೇಶ ವಿದೇಶಗಳಲ್ಲಿ ಕನ್ನಡವನ್ನು ಪಸರಿಸಿದ ಕನ್ನಡದ ಕಟ್ಟಾಳು : ರಮೇಶ್ ಗೌಡ ಕಡಮೆ
- ಶಾಸಕ ಸತೀಶ್ ಸೈಲ್ ಗೆ ಮಧ್ಯಂತರ ಜಾಮೀನು
ಈ ಘಟನೆಗೆ ಸಂಬಂಧಿಸಿದಂತೆ ಮಗುವಿನ ಸಂಬಂಧಿಕರು ಮತ್ತು ಸಾರ್ವಜನಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದು, ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಆಸ್ಪತ್ರೆ ಆಡಳಿತವು ಈ ಕುರಿತು ತನಿಖೆ ನಡೆಸಬೇಕೆಂದು ಬೇಡಿಕೆ ಮುಂದುವರೆದಿದೆ. ಜಿಲ್ಲಾ ಆಸ್ಪತ್ರೆಯ ಆಡಳಿತ ಮತ್ತು ವೈದ್ಯಕೀಯ ಸಿಬ್ಬಂದಿ ಈ ಘಟನೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಬೇಕೆಂದು ಸಾರ್ವಜನಿಕರು ಮತ್ತು ಸಂಬಂಧಿಕರು ಆಗ್ರಹಿಸಿದ್ದಾರೆ.