www.suddibindu.in
ದಾವಣಗೆರೆ: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರಾ ಬಳಿಯ ಅರಣ್ಯ ಪ್ರದೇಶದಲ್ಲಿ ಕಾರಿನಲ್ಲಿ ವಿಷ ಸೇವಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬಿ ಸಿ ಪಾಟೀಲ್ ಅವರ ಹಿರಿಯ ಪುತ್ರಿಯ ಪತಿ ಪ್ರತಾಪ್ ಕುಮಾರ್ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹೆದ್ದಾರಿ ಬದಿಯಲ್ಲಿ ಕಾರು ನಿಲ್ಲಿಸಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಮಿಸಿದ ಸ್ಥಳೀಯರು ಪ್ರತಾಪ್ ಕುಮಾರ್ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.ಆದರೆ, ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ.
ಇದನ್ನೂ ಓದಿ
- gold rate/ ಚಿನ್ನ, ಬೆಳ್ಳಿ ದರ ದಸರಾ ವೇಳೆ ಇಳಿಕೆ ಸಾಧ್ಯತೆ
- ಏರ್ ಇಂಡಿಯಾ ವಿಮಾನ ದುರಂತ : ಗೋಕರ್ಣದಲ್ಲಿ ಪಿಂಡಪ್ರದಾನ
- Accident /ಘನಘೋರ ಅಪಘಾತ: ಲಾರಿ ಹರಿದು 8ಮಂದಿ ಸಾವು : 20ಕ್ಕೂ ಹೆಚ್ಚು ಜನ ಗಂಭೀರ
ಬಿ. ಸಿ. ಪಾಟೀಲ್ ಅಳಿಯ ಕೆ.ಜಿ.ಪ್ರತಾಪ್ ಕುಮಾರ್ ಯಾವ ಕಾರಣಕ್ಕೆ ಇಂತಹ ನಿರ್ಧಾರಕ್ಕೆ ಮುಂದಾದರು ಅನ್ನೋದು ಇನ್ನೂ ಗೊತ್ತಿಲ್ಲ. ಸದ್ಯ ಪೊಲೀಸರು ಈ ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ..