suddibindu.in
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದುವಾರದ ಹಿಂದಷ್ಟೆ ಅಬ್ಬರಿಸಿ ಸ್ವಲ್ಪ ಮಟ್ಟಿಗೆ ತಣ್ಣಗಾಗಿದ್ದ ವರುಣ ಮತ್ತೆ ಅಬ್ಬರಿಸಲಾರಂಭಿಸಿದೆ. ಜಿಲ್ಲೆಯ ಕರಾವಳಿಯಲ್ಲಿ ಇನ್ನೂ ಮೂರ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಇಂದು ಆರೇಂಜ್ ಅಲರ್ಟ್ ಘೋಷಣೆಯಾಗಿದ್ದು, ನಾಳೆ,ನಾಡಿದ್ದು, ರವಿವಾರ ಹಾಗೂ ಸೋಮವಾರ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ
- ಕಾರವಾರ ನಗರದ ಹೃದಯಭಾಗದಲ್ಲೇ ಕೆಟ್ಟು ನಿಂತ ಬಸ್ : ಪ್ರಯಾಣಿಕರಿಗೆ ನಿತ್ಯವೂ ನರಕಯಾತನೆ
- ತರಕಾರಿ ತುಂಬಿದ ಲಾರಿ ಪಲ್ಟಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ
- gold rate/ ಚಿನ್ನ, ಬೆಳ್ಳಿ ದರ ದಸರಾ ವೇಳೆ ಇಳಿಕೆ ಸಾಧ್ಯತೆ
ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ.
ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶೀತಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ತಿಳಿಸಲಾಗಿದ್ದು, ಅಗತ್ಯವಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.