suddibindu.in
ಕಾರವಾರ:
ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ ,ಯಲ್ಲಾಪುರ, ದಾಂಡೇಲಿ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..