suddibindu.in
ಕೇರಳ: ನೇರೆ ರಾಜ್ಯ ವಯನಾಡು ಜಿಲ್ಲೆಯಲ್ಲಿ ಇಂದು ನಸುಕಿನ ಜಾವ ಸರಣಿ ಭೂಕುಸಿತ ಸಂಭವಿಸಿದೆ. ಮೇಪ್ಪಾಡಿ ಬಳಿ ಗುಡ್ಡ ಕುಸಿದು ಚೂರ್ಲಮಲ ಪಟ್ಟಣ ನಿರ್ನಾಮವಾಗಿದೆ. ಘಟನೆಯಲ್ಲಿ ವಯನಾಡು ಜಿಲ್ಲಾಧ್ಯಂತ 45ಮಂದಿ ಸಾವನ್ನಪ್ಪಿರು ಶಂಕೆ ವ್ಯಕ್ತವಾಗಿದ್ದು, 65 ಮಂದಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.ಇದುವರೆಗೆ ಸುಮಾರು 41 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸುಮಾರು 66 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಯನಾಡ್ ಜಿಲ್ಲೆಯ ಅಧಿಕಾರಿಗಳ ಪ್ರಕಾರ, ಕೊಲ್ಲಲ್ಪಟ್ಟವರಲ್ಲಿ, ಜಿಲ್ಲೆಯ ಚೂರ್ಲಮಲ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ಕು ಜನರು ಸಾವನ್ನಪ್ಪಿದ್ದರೆ, ನೇಪಾಳಿ ಕುಟುಂಬದ ಒಂದು ವರ್ಷದ ಮಗು ತೊಂಡರ್ನಾಡ್ ಗ್ರಾಮದಲ್ಲಿ ಸಾವನ್ನಪ್ಪಿದೆ. ಇದಲ್ಲದೆ, ಪೋತುಕಲ್ ಗ್ರಾಮದ ಬಳಿಯ ನದಿಯ ದಡದಿಂದ ಐದು ವರ್ಷದ ಮಗು ಸೇರಿದಂತೆ ಮೂರು ಶವಗಳನ್ನು ಮೇಲೆತ್ತಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ
- Keni Port/ಕೇಣಿ ಬಂದರು ಅಹವಾಲು ಸಭೆಯಲ್ಲಿ ದಬ್ಬಾಳಿಕೆ – ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
- ಮೂಸುಕುಧಾರಿಯ ಅಸಲಿ ಮುಖವಾಡ ಬಯಲು : 10 ದಿನ ಎಸ್ಐಟಿ ಕಸ್ಟಡಿಗೆ
- ಗಣೇಶ ಚತುರ್ಥಿಗೆ ವಿಶೇಷ ರೈಲು: ಬೆಂಗಳೂರಿನಿಂದ ಉತ್ತರ ಕನ್ನಡ ಕರಾವಳಿ ಭಾಗಕ್ಕೆ ಪ್ರಯಾಣ ಸುಲಭ
ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್ಡಿಎಂಎ) ಫೈರ್ಫೋರ್ಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡಗಳನ್ನು ಪೀಡಿತ ಪ್ರದೇಶಕ್ಕೆ ಸಜ್ಜುಗೊಳಿಸಿದ್ದು, ನೂರಾರು ಮಂದಿ ಸಿಲುಕಿರುವ ಶಂಕೆ ಇದೆ. ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳೊಂದಿಗೆ ಹೆಚ್ಚುವರಿ ಎನ್ಡಿಆರ್ಎಫ್ ತಂಡ ಕೂಡ ಸಹಾಯಕ್ಕೆ ತೆರಳಿದೆ.
ಜನರ ಸ್ಥಳಾಂತರಕ್ಕೆ ಹೆಲಿಕಾಪ್ಟರ್ ನಿಯೋಜನೆ: ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರೆ, ತೊಂಡರ್ನಾಡ್ ಗ್ರಾಮದಲ್ಲಿ ನೇಪಾಳ ಮೂಲದ ಕುಟುಂಬದ ಒಂದು ವರ್ಷದ ಮಗು ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.