suddibindu.in
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ , ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಅಗಷ್ಟ್ 01 ( ಗುರುವಾರ) ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ , ಭಟ್ಕಳ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..
ಉತ್ತರಕನ್ನಡ ಜಿಲ್ಲೆಯ ಕರಾವಳಿ ತಾಲೂಕು ಸೇರಿದಂತೆ ಹಲವೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನದಿ ತೀರದಲ್ಲಿನ ಜನ ಮತ್ತೆ ಆತಂಕಕ್ಕೆ ಒಳಗಾಗುವಂತಾಗಿದೆ.
ಇದನ್ನೂ ಓದಿ
- ಆರ್ಟಿಐ ಹೆಸರಿನಲ್ಲಿ ಕೋಟಿ ಹಣದ ಬೇಡಿಕೆ: ಮುಂಡಗೋಡ-ಹುಬ್ಬಳ್ಳಿ ಗ್ಯಾಂಗ್ ಪೊಲೀಸ್ ಬಲೆಗೆ..!

- ಐದು ವರ್ಷ ಅಪಘಾತವಿಲ್ಲ.!ಭಟ್ಕಳದ ಚಾಲಕ ರಾಮಚಂದ್ರ ನಾಯ್ಕ ಅವರಿಗೆ ಬೆಳ್ಳಿ ಪದಕದ ಗೌರವ

- ನ್ಯಾಯ ಸಿಗದಿದ್ದರೆ ಬಸ್ಸ್ಟ್ಯಾಂಡ್ನಲ್ಲಿ ಧರಣಿ : ಆಟೋ ಚಾಲಕರಿಂದ ಎಚ್ಚರಿಕೆ

ಇಂದು ಬೆಳಿಗ್ಗೆಯಿಂದ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾದ ಮಳೆ ಸಂಜೆ ಆಗುತ್ತಿದ್ದಂತೆ ಅಬ್ಬರಿಸಲು ಸುರುವಾಗಿದೆ. ಜಿಲ್ಲೆಯ ಭಟ್ಕಳ,ಹೊನ್ನಾರವರ,ಕುಮಟಾ,ಅಂಕೋಲಾ, ಕಾರವಾರ,ಯಲ್ಲಾಪುರ ಹಾಗೂ ಶಿರಸಿಯಲ್ಲಿ ಮಳೆ ಜೋರಾಗಿದೆ. ಭಾರಿ ಮಳೆಯಿಂದಾಗಿ ಗಂಗಾವಳಿ,ಅಘನಾಶಿನಿ, ಶರವಾವತಿ ನದಿಗಳಲ್ಲ ನೀರಿನ ಹರಿವು ಜೋರಾಗಿದೆ. ಇದರಿಂದಾಗಿ ನದಿ ತೀರದಲ್ಲಿನ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ.
ಇನ್ನೂ ಶರಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದ್ದು, ಇದರಿಂದ ಭಾರೀ ಪ್ರಮಾಣದ ನೀರನ್ನ ಶರಾವತಿ ನದಿಗೆ ನಾಳೆಯಿಂದ ಬಿಡಲಾಗುತ್ತದೆ. ಇದರಿಂದ ಶರಾವತಿ ನದಿತೀರದಲ್ಲಿನ ಪ್ರವಾಸಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.ಡ್ಯಾಂ ನಿಂದ ನೀರು ಬಿಡುವ ಬಗ್ಗೆ ಈಗಾಗಲೇ ಜಿಲ್ಲಾಡಳಿತದಿಂದ ಎಚ್ಚರಿಕೆ ಸಹ ನೀಡಲಾಗಿದೆ.
ಜ




