suddibindu.in
Karwar;ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿತಕ್ಕೆ ಸಂಬಂಧಿಸಿ(CM) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (uttara Kannada DC) ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.
ಇದನ್ನೂ ಓದಿ
- ಮನೆ ಬೀಗ ಮುರಿದು 40ಗ್ರಾಂ ಚಿನ್ನಾಭರಣ ಕಳ್ಳತನ
- ಅಪ್ರಾಪ್ತ ಬಾಲಕಿಗೆ ಮುತ್ತು ಕೊಟ್ಟ ಆರೋಪದಲ್ಲಿ ಹೆಡ್ಕಾನ್ಸಟೇಬಲ್ ಅಮಾನತ್ತು
- ದಯವಿಟ್ಟು ಕುಮಟಾ-ಶಿರಸಿ ರಸ್ತೆ ಬಂದ್ ಮಾಡಬೇಡಿ : ಭಾಸ್ಕರ್ ಪಟಗಾರ
ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ, ಸೇತುವೆಯ ಬಲವತ್ತತೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.