suddibindu.in
ಜೋಯಿಡಾ : ಉತ್ತರಕನ್ನಡ ಜಿಲ್ಲೆಯ ಗಡಿಭಾಗವಾಗಿರುವ ಜೋಯಿಡಾ ತಾಲೂಕಿನ ಕ್ಯಾಸಲ್ ರಾಕ್ ಬಳಿ ಗೂಡ್ಸ್ ರೈಲಿನ ಹನ್ನೊಂದ ಬೋಗಿ ಹಳಿ ತಪ್ಪಿರುವ ಘಟನೆ ನಡೆಸಿದೆ.
ದೂದ್ ಸಾಗರ್‌ನಿಂದ(DOODSAGAR) ಸೋನಾಲಿಂ ನಡುವಿನ ಸುರಂಗ ಸಂಖ್ಯೆ 15ರ ಸಮೀಪ ತೋರಣಗಲ್ ಹೊಸಪೇಟೆಯಲ್ಲಿ ವಾಸ್ಕೋದಿಂದ ಜಿಂದಾಲ್ ಕಂಪನಿಗೆ ಕಲ್ಲಿದ್ದಲು ಸಾಗಿಸುವ ಸರಕು ರೈಲು ದಬ್ಬೆಯಲ್ಲಿ ಹಳಿ ತಪ್ಪಿದೆ. ಸದ್ಯ ಈ ಮಾರ್ಗದಲ್ಲಿ ಎಲ್ಲಾ ರೈಲು ಸಂಚಾರ ಸ್ಥಗಿತ ಮಾಡಲಾಗಿದೆ.
ಇದನ್ನೂ ಓದಿ
- school holidayಭಾರಿ ಮಳೆ ನಾಳೆ ಶಾಲೆ-ಅಂಗನವಾಡಿಗೆ ರಜೆ ಘೋಷಣೆ
- School holiday ಭಾರಿ ಮಳೆ ನಾಳೆ ಶಾಲೆ-ಅಂಗನವಾಡಿಗೆ ರಜೆ ಘೋಷಣೆ
- “ಐ ಲವ್ ಯು” ಅಂತಾ ಹೇಳುವುದು ಲೈಂಗಿಕ ಉದ್ದೇಶವಲ್ಲ/ಹೈಕೋರ್ಟ್
ಈ ಮಾರ್ಗದಲ್ಲಿ ಸಂಚರಿಸುವ ರೈಲು ಸಂಖ್ಯೆ 17309 ಯಶವಂತಪುರ ದಿಂದ ವಾಸ್ಕೋಡಿ ಹಾಗೂ 17310 ವಾಸ್ಕೋಡಿಯಿಂದ ಯಶವಂತಪುರಕ್ಕೆ ಹೋಗುವ ಎರಡು ರೈಲುಗಳು ರದ್ದು ಮಾಡಲಾಗಿದೆ.ಇಂದು ಸಂಜೆ ತೆರಳುವ ಗೋವಾ ಎಕ್ಸ್‌ಪ್ರೆಸ್ ರೈಲು ಮಾರ್ಗ ಬದಲಾವಣೆ (ROUTE)ಮಾಡಲಾಗಿದೆಯೆಂದು ರೈಲ್ವೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹಳಿ ತಪ್ಪಿದ ಗೂಡ್ಸ್ ರೈಲನ್ನು ಮೇಲೆತ್ತುವ ಕಾರ್ಯ ಪ್ರಾರಂಭವಾಗಿದ್ದು ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.