suddibindu.in
ಬೆಂಗಳೂರು: ಚಿನ್ನದ ದರದಲ್ಲಿ ಸತತ ಎರಡನೇ ದಿನವೂ ಏರಿಕೆ ಕಂಡು ಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 12) ಚಿನ್ನದ ದರ ಹೆಚ್ಚಾಗಿದೆ (Gold Rate Today). ಇಂದು 1 ಗ್ರಾಂ 22 ಕ್ಯಾರಟ್‌ ಚಿನ್ನದ ದರದಲ್ಲಿ ₹ 20 ಮತ್ತು 24 ಕ್ಯಾರಟ್‌ ಚಿನ್ನದ ಬೆಲೆಯಲ್ಲಿ ₹ 22 ಏರಿಕೆ ಕಂಡು ಬಂದಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,445 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,031 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,560 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,450 ಮತ್ತು ₹ 6,44,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,248 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,310 ಮತ್ತು ₹ 7,03,100 ತಲುಪಿದೆ.

ಇದನ್ನೂ ಓದಿ

ಇಂದಿನ ಬೆಳ್ಳಿ ದರಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ