suddibindu.in
ಬೆಂಗಳೂರು: ಕರಾವಳಿ ಕರ್ನಾಟಕದ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಯಾವೇಲ್ಲಾ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿತ್ರದುರ್ಗ, ಹಾಸನ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ಗದಗ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡುನ ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ-ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡುನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆ-ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ
- ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್ : ವಿದ್ಯಾರ್ಥಿಗಳು ಸೇರಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ
- ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ನೆರವಿನ ಕೈ ಚಾಚುವಂತೆ ಮನವಿ
- ಹೊನ್ನಾವರದಲ್ಲಿ ಭೀಕರ ದುರಂತ: ಕಾರಿಗೆ ಬೆಂಕಿ, ಇಬ್ಬರು ಸಜೀವ ದಹನ
ನಾಳೆ ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆ-ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ-ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡುನ ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ-ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡುನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆ-ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಅಗಷ್ಟ್ 17ಕ್ಕೆ ಯಾವೇಲ್ಲಾ ಜಿಲ್ಲೆಯಲ್ಲಿ ಮಳೆಯಾಗಲಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡುನ ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡುನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 48 ಗಂಟೆಗಳು
ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆ/ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ.. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 21° C ಆಗಿರಬಹುದು.







