ಬೆಂಗಳೂರು : ಇನ್ನ ಮೇಲೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ ಹಾಗೂ ಯುಕೆಜಿಯನ್ನು ಆರಂಭಿಸಲಾಗುವುದು ಎಂದಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಗುಡ್ ನ್ಯೂಸ್ ನೀಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಧು ಬಂಗಾರಪ್ಪ ಅವರು, ಕಲ್ಯಾಣ ಕರ್ನಾಟಕದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ,ಯುಕೆಜಿ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲೂ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ
- ಅಪಘಾತ ನಿಯಂತ್ರಣಕ್ಕೆ ಕುಮಟಾದಲ್ಲಿ ಬಿಗ್ ಆಕ್ಷನ್ : ನಿಯಮ ಮೀರಿ ವಾಹನ ಓಡಿಸಿದ್ರೆ ಕಾನೂನು ಕ್ರಮ
- ಸುಗಮವಾಗಿ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸಲು ಎಸ್ಪಿಗೆ ರೂಪಾಲಿ ನಾಯ್ಕ ಮನವಿ
- ದಿನಕರ ಶೆಟ್ಟಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಬಂಧನ
ರಾಜ್ಯದಲ್ಲಿರುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಎಲ್ ಕೆಜಿ, ಯುಕೆಜಿಯಿಂದ 12ನೇ ತರಗತಿಯವರೆಗೆ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ಸರಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದಿದ್ದಾರೆ.ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. ಇದಕ್ಕಾಗಿ ಶಿಕ್ಷಕರು ಕೊರತೆಯಿರುವಂತ ಶಾಲೆಗಳಿಗೆ 45 ಸಾವಿರ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ.
ಸದ್ಯದಲ್ಲೇ 5,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು. ಈಗಾಗಲೇ 1200 ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.