suddibindu.in
ಯಲ್ಲಾಪುರ: ಶಾಸಕ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣ ಪಂಚಾಯತದ ಸಭಾಂಗಣದಲ್ಲಿ ಪ.ಪಂಚಾಯತ ವಿಶೇಷ ಸಾಮಾನ್ಯ ಸಭೆ ನಡೆಸಿದರು.

ಫಾರಂ ನಂಬರ್ 3 ಹಾಗೂ ಖಾತಾ ಬದಲಾವಣೆಯಲ್ಲಿ ಉಂಟಾಗುತ್ತಿರುವ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷರಾದ ನರ್ಮದಾ ನಾಯ್ಕ, ಉಪಾಧ್ಯಕ್ಷರಾದ ಅಮಿತ ಅಂಗಡಿ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಅಲಿ, ತಹಶೀಲ್ದಾರ್ ಅಶೋಕ ಭಟ್, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನೀಲ್ ಗಾವಡೆ ಸೇರಿದಂತೆ ಪ‌.ಪಂ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ