suddibindu.in
ತಿರುಪತಿ :ಮೀನುಗಾರಿಕೆ ಬಂದರು ಒಳನಾಡು ಜಲಸಾರಿಗೆ ಹಾಗೂ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯರು ಇಂದು ಧರ್ಮಪತ್ನಿ ಪುಷ್ಪಲತಾ ವೈದ್ಯ ಹಾಗೂ ಮಗಳು ಬೀನ ವೈದ್ಯ ಜೊತೆಯಲ್ಲಿ ಕುಟುಂಬ ಸಮೇತರಾಗಿ ತಿರುಪತಿಯ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ಆಂಧ್ರಪ್ರದೇಶದ ತಿರುಮಲದಲ್ಲಿರುವ ತಿರುಪತಿ ವೆಂಕಟರಮಣ ದೇವಸ್ಥಾನದಲ್ಲಿ ಸಚಿವ ಮಂಕಾಳು ವೈದ್ಯ ಅವರು ಶ್ರೀದೇವರಿಗೆ ಕೈ ಮುಗಿದು ಪ್ರಾರ್ಥನೆ ಸಲ್ಲಿಸಿದ್ದಾರೆ. ಶ್ರೀ ವೆಂಕಟೇಶ್ವರ ಸ್ವಾಮಿಯ ಕೃಪೆ ಪ್ರತಿಯೊಬ್ಬರ ಮೇಲಿರಲಿ.ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ ಎಂದು ತಿರುಪತಿ ತಿಮ್ಮಪ್ಪನಲ್ಲಿ ಬೇಡಿಕೊಂಡಿದ್ದಾರೆ..
ಇದನ್ನೂ ಓದಿ
.