suddibindu.in
ಭಟ್ಕಳ :ಚುನಾವಣೆ ಪೂರ್ವದಲ್ಲಿ ನಮ್ಮ ಸರ್ಕಾರ ನಾಡಿನ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ನೀಡುವ ಭರವಸೆ ನೀಡಿತ್ತು.ಅದರಂತೆ ಅಧಿಕಾರಕ್ಕೆ ಬಂದು ಕೆಲವೇ ದಿನಗಳಲ್ಲಿ ನಾಡಿನ ಜನತೆಗೆ ಪಂಚ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದ್ದರು

ಅವರು ಭಟ್ಕಳ ಪಂಚಾಯತ್ ಕಾರ್ಯಾಲಯದಲ್ಲಿ ತಾಲೂಕ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟಿಸಿ ಮಾತನಾಡಿದರು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಈ ಯೋಜನೆ ತಲುಪಿಸುವ ಗುರಿಯೊಂದಿಗೆ ರಾಜ್ಯ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ, ಹಾಗೂ ತಾಲೂಕ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಿ ಕಚೇರಿಗಳನ್ನು ಸ್ಥಾಪಿಸುತ್ತಿದೆ ಎಂದರು.

ಈ ಸಂಧರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಸತೀಶ್ ನಾಯ್ಕ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಜನಾರ್ಧನ ದೇವಾಡಿಗ, ತಾಲೂಕ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಜು ನಾಯ್ಕ, ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕಾರದ ವೆಂಕಟೇಶ್ ನಾಯ್ಕ ಹಾಗೂ ಮಾನ್ಯ ತಹಸೀಲ್ದಾರ್ ನಾಗರಾಜ ನಾಯ್ಕಡ್, ತಾಲೂಕ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ವೆಂಕಟೇಶ್ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ