suddibindu.in
ಮುರುಡೇಶ್ವರ:ವೆಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್ ಮತ್ತು ಲಾಡ್ಜ್ ಮೇಲೆ ದಾಳಿ ನಡೆಸಿ ನಾಲ್ವರನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರದ ಬಸ್ತಿನಕ್ಕಿಯ ಹೈ ಲೆಂಡ್ ಹೋಟೆಲ್‌ನಲ್ಲಿ ನಡೆದಿದೆ.
ದಾಳಿಯಲ್ಲಿ ಇಬ್ಬರೂ ಯುವತಿಯರು ಬ್ಯಾಗು,ಬಟ್ಟೆ ಎಲ್ಲವನ್ನೂ ಬಿಟ್ಟು ಪರಾರಿಯಾಗಿದ್ದಾರೆ. ಹೋಟೆಲ್ ಸಿಬ್ಬಂದಿ ಸೇರಿ ನಾಲ್ವರು ಪುರುಷರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರ ಸೂಚನೆ ಮರೆಗೆ ಕಾರವಾರ ಸಿಇಎನ್ ವಿಭಾಗದ ಡಿವೈಎಸ್ಪಿ ಅಶ್ವಿನಿ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಈ ಹೋಟೆಲ್ ಪಕ್ಕದಲ್ಲಿ ಯಾವುದೇ ಅನುಮತಿ ಇಲ್ಲದೆ ಕ್ಲಬ್ ಕೂಡ ನಡೆಸಲಾಗುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ