suddibindu.in
ಕಾರವಾರ :ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿರುವ ಐಲ್ಯಾಂಡ್ ಹೋಟೆಲ್ ನಲ್ಲಿ ವೆಶ್ಯಾವಾಟಿಕೆ ಸೇರಿದಂತೆ ಅಕ್ರಮ ಚಟುವಟಿಕೆ ತಡೆಯುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಮುರುಡೇಶ್ವರ ಠಾಣಾ ಪಿಎಸ್ಐ ಅವರನ್ನ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಪ್ರವಾಸಿಗರ ಸ್ವರ್ಗ ಅಂತಾ ಕರೆಯುವ ಮುರುಡೇಶ್ವರಕ್ಕೆ ನಿತ್ಯವೂ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ.ಈ ಭಾಗದಲ್ಲಿ ಸಾಕಷ್ಟು ಅಕ್ರಮ ಚಟುವಟಿಕೆಗಳು ನಡೆಯುತ್ತಿರುತ್ತವೆ. ಹೀಗಿರುವಾ ಅಲ್ಲಿನ ಠಾಣಾಧಿಕಾರಿ ಮಂಜುನಾಥ ಅವರು ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ವಿಫಲರಾಗಿ ಕರ್ತವ್ಯದಲ್ಲಿ ಅಶಿಸ್ತು ಮತ್ತು ದುರ್ನಡತೆ ಹಾಗು ಬೇಜವಾಬ್ದಾರಿತನ ತೋರಿರುವುದರಿಂದ ಅವರ ಮೇಲೆ ಇಲಾಖೆ ತಕ್ಷಣ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನಗೊಳಿಸಿದೆ.


ಇನ್ನೂ ದಾಳಿಯ ವೇಳೆ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡದೇ ಮತ್ತು ಮೇಲ್ವಿಚಾರಣೆ ನಡೆಸದೇ ಇರುವ ಪೊಲೀಸ್ ನಿರೀಕ್ಷಕರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ಪ್ರಭಾರ್ ಗ್ರಾಮೀಣ ವೃತ್ತರವರಿಗೂ ಸಹ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ..

ಇದನ್ನೂ ಓದಿ