suddibindu.in
ಕಾರವಾರ ; ಉತ್ತರಕನ್ನಡ ಜಿಲ್ಲೆಯ ಯುವಕರಿಗೆ ಅನುಕೂಲಕರವಾಗುವಂತೆ ಹಾಗೂ ಪರಿಸರಕ್ಕೆ ಹಾನಿಯಾಗದೆ ಇರುವಂತಹ ಕೈಗಾರಿಯನ್ನ ಕಾರವಾರದಲ್ಲಿ ಸ್ಥಾಪಿಸುವಂತೆ ಜೆಡಿಎಸ್ ಮುಖಂಡರು ಹಾಗೂ ಜಿಲ್ಲಾ ಪಂಚಾಯತ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷೆ ಚೈತ್ರಾ ಕೊಠಾರಕರ್ ಅವರು ಕೇಂದ್ರದ ಬೃಹತ್ ಕೈಗಾರಿಕೆ ಸಚಿವರಾಗಿರುವ ಕುಮಾರಸ್ವಾಮಿ ಅವರನ್ನ ದೆಹಲಿಯಲ್ಲಿ ಭೇಟಿಯಾಗಿ‌ ಮನವಿ ಸಲ್ಲಿಸಿದ್ದರು.

ಉತ್ತರಕನ್ನಡ ಜಿಲ್ಲೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಒಂದು. ಒಂದು ಕಡೆ ಗೋವಾ ರಾಜ್ಯ, ಇನ್ನೊಂದೆಡೆ ಬೆಳಗಾವಿ, ಧಾರವಾಡ, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಈ ಜಿಲ್ಲೆ ಭೌಗೋಳಿಕವಾಗಿಯೂ ರಾಜ್ಯದ ಅತೀ ದೊಡ್ಡ ಜಿಲ್ಲೆಗಳಲ್ಲಿ ಒಂದಾಗಿದ್ದು, ಹೇರಳವಾದ ನೈಸರ್ಗಿಕ ಸಂಪತ್ತನ್ನು ಹೊಂದಿದೆ. ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಉತ್ತರಕನ್ನಡ ಜಿಲ್ಲೆಗೆ ಹಲವು ಮಹತ್ವದ ಕೊಡುಗೆಗಳನ್ನ ನೀಡಿದ್ದೀರಿ. ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆಯಿಂದ ನಮ್ಮ ಯುವಜನತೆ ಪರದಾಡುತ್ತಿದ್ದಾರೆ. ಉದ್ಯೋಗಕ್ಕಾಗಿ ಪರ ಜಿಲ್ಲೆ, ಪರ ರಾಜ್ಯಕ್ಕೆ ಅಲೆದಾಡುತ್ತಿದ್ದು, ಉತ್ತರಕನ್ನಡ ಜಿಲ್ಲೆಯಲ್ಲಿ ಒಂದೂ ಕೈಗಾರಿಕೆಗಳಿಲ್ಲದಿರುವುದರಿಂದ ಸಮಸ್ಯೆ ಜೀವಂತವಾಗಿದೆ.

ಉತ್ತರಕನ್ನಡ ಜಿಲ್ಲೆಯ ಅದರಲ್ಲೂ ಕಾರವಾರ-ಅಂಕೋಲಾ ಕ್ಷೇತ್ರ ಜಲವಿದ್ಯುತ್ ಯೋಜನೆಗೆ, ಸೀಬರ್ಡ್ ನೌಕಾನೆಲೆ, ಕೊಂಕಣ ರೈಲ್ವೆಗೆ, ಕೈಗಾ ಅಣುವಿದ್ಯುತ್ ಸ್ಥಾವರಕ್ಕೆ ಜನರು ಆಸ್ತಿಪಾಸ್ತಿ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಇಲ್ಲಿಯ ಜನ ತಮ್ಮ ಅಮೂಲ್ಯ ಜೀವನವನ್ನು ತ್ಯಾಗ ಮಾಡಿದ್ದಾರೆ. ಈ ಕುಟುಂಬಗಳ ವಿದ್ಯಾವಂತರಿಗೆ ಆಯಾ ಯೋಜನೆಗಳಲ್ಲಿ ಇದುವರೆಗೂ ಉದ್ಯೋಗ ಪಡೆದುಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ . ಕಾರವಾರ ತಾಲೂಕಿನ ಮುಡಗೇರಿ ಗ್ರಾಮದಲ್ಲಿ ಕೈಗಾರಿಕಾ ಇಲಾಖೆ ಪಡೆದುಕೊಂಡಿದ್ದ ಸಾಕಷ್ಟು ಜಮೀನು ಈಗಾಗಲೇ ಲಭ್ಯವಿದ್ದು, ಕೈಗಾರಿಕೆಗಳಿಗೆ ಅನುಕೂಲವಾಗಿದೆ. ಹೀಗಾಗಿ ಜಿಲ್ಲೆಯ ಯುವ ಜನರ ಅನುಕೂಲಕ್ಕಾಗಿ ಯಾವುದಾದರೂ ಪರಿಸರ ಪೂರಕವಾಗಿರುವ ಕೈಗಾರಿಕೆಗಳನ್ನು ನೀಡಿದರೆ ಈ ಭಾಗದ ಯುವಕರು ಅನ್ಯ ರಾಜ್ಯಗಳಿಗೆ ಉದ್ಯೋಗಕ್ಕೆ ಹೋಗುವುದು ತಪ್ಪುತ್ತದೆ. ಎಂದು ಮನವಿ ಮೂಲಕ ತಿಳಿಸಿದರು

ಇನ್ನೂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಅವರ ದೆಹಲಿಯ ಕಚೇರಿಯಲ್ಲಿ ಭೇಟಿಯಾಗಿ ಅಭಿನಂದಿಸಿದ ಸಂದರ್ಭದಲ್ಲಿ ಕುಮಾರಸ್ವಾಮಿ ಅವರ ಬಳಿ ಜಿಲ್ಲೆಯ ಕಾರವಾರ-ಅಂಕೋಲಾ ಕ್ಷೇತ್ರದ ಅಭಿವೃದ್ಧಿಯ ಕುರಿತು ಹಲವಾರು ವಿಚಾರಗಳ ಕುರಿತು ಚರ್ಚಿಸಲಾಯಿತು. ಹಾಗೂ ನಿರುದ್ಯೋಗ, ಕೈಗಾರಿಕೆ ಸೇರಿದಂತೆ ಪ್ರಮುಖ ಜ್ವಲಂತ ಸಮಸ್ಯೆಗಳ ಕುರಿತಾಗಿಯೂ ಗಮನಕ್ಕೆ ತಂದಿದ್ದು, ಈ ಬಗ್ಗೆ ಮನವಿ ಸಲ್ಲಿಸುವ ಮೂಲಕ ಮನವರಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಉದ್ಯಮಿ ಚಂದ್ರಹಾಸ ಕೊಠಾರಕರ್ ಉಪಸ್ಥಿತರಿದ್ದರು.

ಇದನ್ನೂ ಓದಿ